ಟೆಲಿಗ್ರಾಂ ಖಾತೆಯಲ್ಲಿದ್ದ ಬಂದ ಲಿಂಕ್ ಮೂಲಕ ಹಣ ಹೂಡಿಕೆ ಮಾಡಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ಬಂಟ್ವಾಳದ ವ್ಯಕ್ತಿ : ಸೆನ್ ಠಾಣೆಯಲ್ಲಿ ಪ್ರಕರಣ ದಾಖಲು - Karavali Times ಟೆಲಿಗ್ರಾಂ ಖಾತೆಯಲ್ಲಿದ್ದ ಬಂದ ಲಿಂಕ್ ಮೂಲಕ ಹಣ ಹೂಡಿಕೆ ಮಾಡಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ಬಂಟ್ವಾಳದ ವ್ಯಕ್ತಿ : ಸೆನ್ ಠಾಣೆಯಲ್ಲಿ ಪ್ರಕರಣ ದಾಖಲು - Karavali Times

728x90

15 August 2025

ಟೆಲಿಗ್ರಾಂ ಖಾತೆಯಲ್ಲಿದ್ದ ಬಂದ ಲಿಂಕ್ ಮೂಲಕ ಹಣ ಹೂಡಿಕೆ ಮಾಡಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ಬಂಟ್ವಾಳದ ವ್ಯಕ್ತಿ : ಸೆನ್ ಠಾಣೆಯಲ್ಲಿ ಪ್ರಕರಣ ದಾಖಲು

 ಬಂಟ್ವಾಳ, ಆಗಸ್ಟ್ 15, 2025 (ಕರಾವಳಿ ಟೈಮ್ಸ್) : ಟೆಲಿಗ್ರಾಂ ಸಾಮಾಜಿಕ ಜಾಲತಾಣದಲ್ಲಿ ಅಪರಿಚಿತ ಖಾತೆಯಿಂದ ಬಂದ ಲಿಂಕ್ ಕ್ಲಿಕ್ ಮಾಡಿದ ಬಂಟ್ವಾಳದ ವ್ಯಕ್ತಿಯೋರ್ವರು ಲಕ್ಷಾಂತರ ರೂಪಾಯಿ ಕಳೆದುಕೊಂಡು ವಂಚನೆಗೊಳಗಾದ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಹಣ ಕಳೆದುಕೊಂಡ ಬಂಟ್ವಾಳ ನಿವಾಸಿ ಸಾಬೀರ್ ಎಂಬವರು ಈ ಬಗ್ಗೆ ಸೆನ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಇವರು ಮೇ 31 ರಂದು ಟೆಲಿಗ್ರಾಂನಲ್ಲಿ ಅಪರಿಚಿತ ಖಾತೆಯಿಂದ ಬಂದ ಲಿಂಕ್ ಕ್ಲಿಕ್ ಮಾಡಿ ಹಣ ಹೂಡಿಕೆ ಮಾಡಲು ತಿಳಿಸಿದಂತೆ ವಂಚಕರ ಬ್ಯಾಂಕ್ ಖಾತೆಗೆ ಹಂತ ಹಂತವಾಗಿ ಒಟ್ಟು 7,09,873/- ರೂಪಾಯಿ ಹಣವನ್ನು ಹೂಡಿಕೆ ಮಾಡಿದ್ದಾರೆ. ಆದರೆ ಹೂಡಿಕೆ ಮಾಡಿದ ಹಣವನ್ನು ಬಳಿಕ ವಿತ್ ಡ್ರಾ ಮಾಡಲು ಆಗಿಲ್ಲ ಎಂದು ನೀಡಿದ ದೂರಿನಂತೆ ಸಿ ಇ ಎನ್ ಪೆÇಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 54/2025 ಕಲಂ 66 (ಡಿ) ಐಟಿ ಆಕ್ಟ್ 318(4) ಬಿ ಎನ್ ಎಸ್ ಪ್ರಕಾರ ಪ್ರಕರಣ ದಾಖಲಾಗಿದೆ.

  • Blogger Comments
  • Facebook Comments

0 comments:

Post a Comment

Item Reviewed: ಟೆಲಿಗ್ರಾಂ ಖಾತೆಯಲ್ಲಿದ್ದ ಬಂದ ಲಿಂಕ್ ಮೂಲಕ ಹಣ ಹೂಡಿಕೆ ಮಾಡಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ಬಂಟ್ವಾಳದ ವ್ಯಕ್ತಿ : ಸೆನ್ ಠಾಣೆಯಲ್ಲಿ ಪ್ರಕರಣ ದಾಖಲು Rating: 5 Reviewed By: karavali Times
Scroll to Top