ಮಂಗಳೂರು, ಆಗಸ್ಟ್ 14, 2025 (ಕರಾವಳಿ ಟೈಮ್ಸ್) : ಸಾಮಾಜಿಕ ಜಾಲತಾಣದಲ್ಲಿ ಅವಮಾನಕಾರಿ ಸಂದೇಶಗಳನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 4 ಹಾಗೂ ವೇಣೂರು ಪೊಲೀಸ್ ಠಾಣೆಯಲ್ಲಿ 2 ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ಹುಬ್ಬಳ್ಳಿ ಚಬ್ಬಿ ಗ್ರಾಮದ ನಿವಾಸಿ ಅಜಿತ್ ನಾಗಪ್ಪ ಬಸಾಪುರ್ (32) ಎಂಬವರ ದೂರಿನಂತೆ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಎಂಬಲ್ಲಿ, ಆರೋಪಿ ಗಿರೀಶ ಮಟ್ಟೆಣ್ಣ ಎಂಬವರು ಜೈನ ಧರ್ಮಕ್ಕೆ ಮತ್ತು ಜೈನ ಧರ್ಮೀಯರ ಭಾವನೆಗಳಿಗೆ ಅವಮಾನಪಡಿಸುವ ಉದ್ದೇಶದಿಂದ ಕುಡ್ಲ ರಾಂಪೇಜ್ ಯೂಟ್ಯೂಬ್ ಚಾನೆಲ್ ಗೆ ನೀಡಿದ ಸಂದರ್ಶನದಲ್ಲಿ, ಜೈನರು ಹಾಗೂ ಜೈನ ಧರ್ಮದವರ ಬಗ್ಗೆ ತುಚ್ಚವಾಗಿ ಮಾತನಾಡಿರುತ್ತಾರೆ ಹಾಗೂ ಪ್ರಕರಣದ ಮತ್ತೋರ್ವ ಆರೋಪಿ ಕುಡ್ಲ ರಾಂಪೇಜ್ ಚಾನೆಲ್ ಮಾಲೀಕನು ಸದ್ರಿ ಸಂದರ್ಶನದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು, ಜೈನ ಧರ್ಮೀಯರ ಧಾರ್ಮಿಕ ಭಾವನೆಗಳಿಗೆ ಅಪಮಾನಿಸಿರುತ್ತಾನೆ ಎಂಬುದಾಗಿ ನೀಡಿದ ದೂರಿನಂತೆ ಆಗಸ್ಟ್ 12 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 86/2025, ಕಲಂ 196(1)(ಎ) 299 ಬಿ.ಎನ್.ಎಸ್.-2023 ರಂತೆ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ನಿವಾಸಿ ಶ್ರೀಮತಿ ವಿಜಯ (41) ಎಂಬವರು ಆಗಸ್ಟ್ 12 ರಂದು ಮದ್ಯಾಹ್ನ ತನ್ನ ಫೇಸ್ ಬುಕ್ ಖಾತೆಯನ್ನು ನೋಡುತ್ತಿದ್ದಾಗ “ವಿಕಾಸ್ ವಿಕ್ಕಿ ಹಿಂದೂ” ಎಂಬ ಪೇಸ್ ಬುಕ್ ಖಾತೆಯಲ್ಲಿ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಶ್ಲೀಲ ಪದಗಳನ್ನು ಬಳಸಿ ಸಾರ್ವಜನಿಕವಾಗಿ ಕಿರಿಕಿರಿಯಾಗುವಂತಹ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿರುವುದು ಕಂಡುಬಂದಿರುತ್ತದೆ, ಎಂಬುದಾಗಿ ನೀಡಿದ ದೂರಿನಂತೆ ಆಗಸ್ಟ್ 12ರಂದು ವೇಣೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 71/2025, ಕಲಂ 296 ಬಿಎನ್‍ಎಸ್-2023 ರಂತೆ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ನಿವಾಸಿ ಧನಂಜಯ ಜೈನ್ (47) ಎಂಬವರು ಆಗಸ್ಟ್ 12 ರಂದು ಮದ್ಯಾಹ್ನ ತನ್ನ ಫೇಸ್ ಬುಕ್ ಖಾತೆಯನ್ನು ನೋಡುತ್ತಿದ್ದಾಗ “ಏನ್ರಿ ಗೌಡ್ರೆ” ಎಂಬ ಪೇಸ್ ಬುಕ್ ಖಾತೆಯಲ್ಲಿ ಅಶ್ಲೀಲ ಪದಗಳನ್ನು ಬಳಸಿ ಸಾರ್ವಜನಿಕವಾಗಿ ಕಿರಿಕಿರಿಯಾಗುವಂತಹ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿರುವುದು ಕಂಡುಬಂದಿರುತ್ತದೆ ಎಂಬುದಾಗಿ ನೀಡಿದ ದೂರಿನಂತೆ ಆಗಸ್ಟ್ 12 ರಂದು ವೇಣೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 72/2025, ಕಲಂ 296 ಬಿಎನ್‍ಎಸ್-2023 ರಂತೆ ಪ್ರಕರಣ ದಾಖಲಾಗಿದೆ.
ಆಗಸ್ಟ್ 13 ರಂದು ಬೆಳಿಗ್ಗೆ, ಬೆಳ್ತಂಗಡಿ ನಿವಾಸಿ ಪ್ರಭಾಕರ ಗೌಡ (51) ಅವರು ತನ್ನ ಮೊಬೈಲಿನಲ್ಲಿ ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ಪರಿಶೀಲಿಸುತ್ತಿದ್ದಾಗ, ಲಾಯರ್ ಜಗದೀಶ್ ಎಂಬಾತನು ತನ್ನ ಫೇಸ್ ಬುಕ್ ಖಾತೆಯಲ್ಲಿ, ಧರ್ಮಸ್ಥಳದಲ್ಲಿ ಪ್ರಸ್ತುತ ನಡೆಯುತ್ತಿರುವ ಉತ್ಖನನ ಕಾರ್ಯಕ್ಕೆ ಸಂಬಂಧಿಸಿದಂತೆ, ಸಾರ್ವಜನಿಕರಿಗೆ ಅಪರಾಧ ಎಸಗಲು ದುಷ್ಪ್ರೇರಣೆಯಾಗುವಂತೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ, ಅಕ್ರಮ ಕೂಟ ಸೇರಿ ಮಾರಕ ಆಯುಧವನ್ನು ಬಳಕೆ ಮಾಡಿ ಅಪರಾಧ ಎಸಗಲು ಪೆÇ್ರೀತ್ಸಾಹಿಸಿರುವುದು ಕಂಡುಬಂದಿರುತ್ತದೆ ಎಂಬುದಾಗಿ ನೀಡಿದ ದೂರಿನಂತೆ ಆಗಸ್ಟ್ 13 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 88/2025 ಕಲಂ 57 ಜೊತೆಗೆ 189(6), 191(3) ಬಿಎನ್‍ಎಸ್-2023 ರಂತೆ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ನಿವಾಸಿ ಪ್ರಭಾಕರ ಗೌಡ (51) ಎಂಬವರು ಆಗಸ್ಟ್ 13 ರಂದು ಬೆಳಿಗ್ಗೆ ತನ್ನ ಮೊಬೈಲಿನಲ್ಲಿ ಸಾಮಾಜಿಕ ಜಾಲತಾಣದ ಸಂದೇಶಗಳನ್ನು ಪರಿಶೀಲಿಸುತ್ತಿರುವಾಗ, ಸಾಮಾಜಿಕ ಜಾಲತಾಣದಲ್ಲಿ ಲೊಕೇಶ್ ಪೂಜಾರಿ ಎಂಬ ಫೇಸ್ ಬುಕ್ ಖಾತೆದಾರನು ತನ್ನ ಫೇಸ್ ಬುಕ್ ಖಾತೆಯಲ್ಲಿ, ಕೋಟಿ ಚೆನ್ನಯರಿಗೆ ಸಂಬಂಧಿಸಿದಂತೆ, ಎರಡು ಸಮುದಾಯಗಳ ನಡುವೆ ಜಾತಿಯ ಆಧಾರದಲ್ಲಿ ವೈಮನಸ್ಸು ಉಂಟಾಗುವಂತಹ ಹಾಗೂ ಸಾರ್ವಜನಿಕರಲ್ಲಿ ಅಪಾಯದ ಭೀತಿಯುಂಟಾಗುವಂತೆ ಸುಳ್ಳು ವದಂತಿಗಳಿರುವ ಸಂದೇಶಗಳನ್ನು ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ಖಾತೆಯಲ್ಲಿ ಪ್ರಸಾರ ಮಾಡಿರುವುದಾಗಿ ನೀಡಿದ ದೂರಿನಂತೆ ಆಗಸ್ಟ್ 13 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 89/2025 ಕಲಂ 353(2) ಬಿಎನ್‍ಎಸ್-2023 ರಂತೆ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ನಿವಾಸಿ ಎಂ ಉದಯ ಪೂಜಾರಿ (41) ಎಂಬವರು ಆಗಸ್ಟ್ 13 ರಂದು ಬೆಳಿಗ್ಗೆ ತನ್ನ ಮೊಬೈಲಿನಲ್ಲಿ ಸಾಮಾಜಿಕ ಜಾಲತಾಣಗಳನ್ನು ಪರಿಶೀಲಿಸುತ್ತಿರುವಾಗ, ಆರೋಪಿ ನವೀನ್ ಜೈನ್ ಎಂಬಾತನು ಯೂಟ್ಯೂಬಿನಲ್ಲಿ, ಜನರು ಅಕ್ರಮಕೂಟ ಸೇರಿ, ಸಾರ್ವಜನಿಕರ ನೆಮ್ಮದಿಗೆ ಭಂಗ ಉಂಟು ಮಾಡುವಂತಹ ಅಪರಾಧಗಳನ್ನು ನಡೆಸಲು ಹಾಗೂ ಕಾನೂನು ಬಾಹಿರ ಕೃತ್ಯಗಳನ್ನು ಎಸಗಲು ದುಷ್ಕೃರಣೆಯಾಗುವಂತೆ ವಿಡಿಯೋಗಳನ್ನು ಪ್ರಸಾರ ಮಾಡಿರುವುದು ಕಂಡುಬಂದಿರುತ್ತದೆ ಎಂಬುದಾಗಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 91/2025 ಕಲಂ 57 ಜೊತೆಗೆ 189, 190 ಬಿ.ಎನ್.ಎಸ್ ಪ್ರಕಾರ ಪ್ರಕರಣ ದಾಖಲಾಗಿದೆ.
































0 comments:
Post a Comment