ಮಂಗಳೂರು, ಆಗಸ್ಟ್ 19, 2025 (ಕರಾವಳಿ ಟೈಮ್ಸ್) : ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣ ಬಳಿಯ ಕೈರಳಿ ಹೋಟೆಲ್ ಸಮೀಪ ಆಗಸ್ಟ್ 13 ರಂದು ಅಟೋ ಕಾಯುತ್ತಿದ್ದ ವ್ಯಕ್ತಿಯನ್ನು ಕಾರಿನಲ್ಲಿ ಅಪಹರಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನದ ಗಟ್ಟಿಯನ್ನು ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಿದ ಮಂಗಳೂರು ಪೊಲೀಸರು 5 ಮಂದಿ ಆರೋಪಿಗಳನ್ನು ಮಹಾರಾಷ್ಟ್ರ ರಾಜ್ಯದ ಪುಣೆ ಎಂಬಲ್ಲಿ ಆಗಸ್ಟ್ 18 ರಂದು ಬಂಧಿಸುವಲ್ಲಿ ಸಫಲರಾಗಿದ್ದಾರೆ.
ಶ್ರೀಹರಿ ಭಾನುದಾಸ ಎಂಬವರು ಆಗಸ್ಟ್ 13 ರಂದು ಬೆಳಿಗ್ಗೆ 7 ಗಂಟೆಗೆ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣ ಬಳಿಯ ಕೈರಳಿ ಹೋಟೆಲ್ ಸಮೀಪ ಆಟೋ ಕಾಯುತ್ತಿದ್ದಾಗ, ಆರು ಮಂದಿ ಅಪರಿತರ ತಂಡ ಇನ್ನೋವಾ ಕಾರಿನಲ್ಲಿ ಬಂದು ತಾವು ಕಸ್ಟಮ್ ಅಧಿಕಾರಿಗಳು, ನಿಮ್ಮ ವಿರುದ್ದ ಮಾಹಿತಿ ಇದೆ, ವಿಚಾರಣೆ ಮಾಡಬೇಕು ಎಂದು ತಿಳಿಸಿ, ತಮ್ಮೊಂದಿಗೆ ಬನ್ನಿ ಎಂದು ಗದರಿಸಿ ಹಿಡಿದುಕೊಂಡು ಬಲವಂತವಾಗಿ ಬಿಳಿ ಬಣ್ಣದ ಇನ್ನೋವಾ ಕಾರಿನಲ್ಲಿ ಕೂರಿಸಿಕೊಂಡು ಉಡುಪಿ ಹೈವೇ ಮಾರ್ಗವಾಗಿ ಉತ್ತರ ಕನ್ನಡ ಜಿಲ್ಲೆಯ ಕುಮುಟಾ ತಲುಪಿದಾಗ ಭಾನುದಾಸ ಅವರ ಬಳಿಯಿದ್ದ ಸುಮಾರು 35 ಲಕ್ಷ ರೂಪಾಯಿ ಮೌಲ್ಯದ 350 ಗ್ರಾಂ ತೂಕದ ಶುದ್ಧ ಬಂಗಾರದ ಗಟ್ಟಿಯನ್ನು ಹೆದರಿಸಿ ಕಿತ್ತುಕೊಂಡು ದರೋಡೆ ಮಾಡಿದ್ದಲ್ಲದೆ ಭಾನುದಾಸ ಅವರನ್ನು ಕುಮಟಾ ತಾಲೂಕಿನ ಶಿರಸಿ ಬಳಿ ಅಂತ್ರವಳ್ಳಿ ಎಂಬಲ್ಲಿ ಬಿಟ್ಟು ಪರಾರಿಯಾಗಿದ್ದರು.
ಈ ಬಗ್ಗೆ ಭಾನುದಾಸ ಅವರು ಕುಮಟಾ ಠಾಣೆಯಲ್ಲಿ ನೀಡಿದ ದೂರಿನಂತೆ ಝೀರೋ ಎಫ್‍ಐಆರ್ ಅಡಿಯಲ್ಲಿ ಪ್ರಕರಣ ದಾಖಲಿಸಿ ಸರಹದ್ದಿನ ಆಧಾರದ ಮೇಲೆ ಮುಂದಿನ ಕ್ರಮದ ಬಗ್ಗೆ ಮಂಗಳೂರು ದಕ್ಷಿಣ ಪೆÇಲೀಸ್ ಠಾಣೆಗೆ ವರ್ಗಾವಣೆಯಾಗಿ ಠಾಣೆಯಲ್ಲಿ ಅಪರಾಧ ಕ್ರಮಾಂಕ 171/2025 ಕಲಂ 310(2), 137(2), 204 ಬಿ ಎನ್ ಎಸ್ ಪ್ರಕಾರ ಪ್ರಕರಣ ದಾಖಲಾಗಿತ್ತು.
ಪ್ರಕರಣವನ್ನು ಭೇಧಿಸಿ ಆರೋಪಿಗಳನ್ನು ಪತ್ತೆ ಹಚ್ಚಲು ಪೆÇಲೀಸ್ ಆಯುಕ್ತರು, ಸಿಸಿಬಿ ಅಧಿಕಾರಿ ಮತ್ತು ಕೇಂದ್ರ ಉಪವಿಭಾಗದಿಂದ ತಂಡವನ್ನು ರಚಿಸಿ ಪ್ರಕರಣದ ತನಿಖೆಯಲ್ಲಿ ಕಂಡುಬಂದ ತಾಂತ್ರಿಕ ಸಾಕ್ಷ್ಯಾಧಾರಗಳಿಂದ ಮತ್ತು ಇತರೆ ಮಾಹಿತಿಗಳಿಂದ ಇದುವರೆಗೆ ಒಟ್ಟು 5 ಮಂದಿ ಆರೋಪಿಗಳನ್ನು ಆಗಸ್ಟ್ 18ರಂದು ಸಂಜೆ ಮಹಾರಾಷ್ಟ್ರದ ಪುಣೆ ಎಂಬಲ್ಲಿ ಪತ್ತೆ ಹಚ್ಚಿದ್ದಾರೆ. ಆರೋಪಿಗಳು ವಿಚಾರಣೆ ವೇಳೆ ತಪೆÇ್ಪಪ್ಪಿಗೆ ಮಾಡಿಕೊಂಡಿದ್ದು, ದೋಚಿದ್ದ ಚಿನ್ನವನ್ನು ಮಾರಾಟ ಮಾಡಿದ ಬಗ್ಗೆ ಮಾಹಿತಿ ನೀಡಿದ್ದಾರೆ. ಆರೋಪಿಗಳನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಪೆÇಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ಕೈಗೊಳ್ಳಲಾಗುವುದು. ದರೋಡೆ ಮಾಡಿದ್ದ ಚಿನ್ನ ಮತ್ತು ಕೃತ್ಯಕ್ಕೆ ಬಳಸಿದ ವಾಹನಗಳನ್ನು ವಶಪಡಿಸಿಕೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
0 comments:
Post a Comment