ಆಗಸ್ಟ್ 20 ರಂದು ಡಿ ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆ - Karavali Times ಆಗಸ್ಟ್ 20 ರಂದು ಡಿ ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆ - Karavali Times

728x90

16 August 2025

ಆಗಸ್ಟ್ 20 ರಂದು ಡಿ ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆ

ಮಂಗಳೂರು, ಆಗಸ್ಟ್ 16, 2025 (ಕರಾವಳಿ ಟೈಮ್ಸ್) : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಸಾಮಾಜಿಕ ನ್ಯಾಯದ ಹರಿಕಾರ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಆಗಸ್ಟ್  20ರಂದು ಬೆಳಿಗ್ಗೆ  10.30 ಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ. 

ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಫರೀದ್ ಅವರ ಘನ ಉಪಸ್ಥಿತಿಯಲ್ಲಿ ನಡೆಯುವ ಕಾರ್ಯಕ್ರಮವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸುವರು. ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಆಗಸ್ಟ್ 20 ರಂದು ಡಿ ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆ Rating: 5 Reviewed By: karavali Times
Scroll to Top