ಧರ್ಮಸ್ಥಳ, ಆಗಸ್ಟ್ 10, 2025 (ಕರಾವಳಿ ಟೈಮ್ಸ್) : ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣದಲ್ಲಿ ಆರು ಮಂದಿ ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ದಸ್ತಗಿರಿ ಮಾಡಿದ್ದಾರೆ.
ಬಂಧಿತ ಆರೋಪಿಗಳನ್ನು ಧರ್ಮಸ್ಥಳ ನಿವಾಸಿಗಳಾದ ಪದ್ಮಪ್ರಸಾದ್ (32), ಸುಹಾಸ್ (22), ಶಶಿಧರ್(30), ಉಜಿರೆ ನಿವಾಸಿ ಖಲಂದರ್ ಪುತ್ತುಮೋನು (42), ಕಳೆಂಜ ನಿವಾಸಿ ಚೇತನ್ (21), ಕಳ್ಮಂಜ ನಿವಾಸಿ ಗುರುಪ್ರಸಾದ್ (19) ಎಂದು ಹೆಸರಿಸಲಾಗಿದೆ.
ಆಗಸ್ಟ್ 6 ರಂದು ಧರ್ಮಸ್ಥಳ-ಪಾಂಗಳ ಕ್ರಾಸ್ ಬಳಿ ನಡೆದ ಅಹಿತಕರ ಘಟನೆಯ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಧರ್ಮಸ್ಥಳ ಪೆÇಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಶನಿವಾರ ನ್ಯಾಯಾಲಯಕ್ಕೆ ಹಾಜರಾಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗಳಿಗೆ ಮಧ್ಯಂತರ ಜಾಮೀನು ನೀಡಿ ಬಿಡುಗಡೆಗೊಳಿಸಿದೆ.
0 comments:
Post a Comment