ಮಂಗಳೂರು, ಆಗಸ್ಟ್ 31, 2025 (ಕರಾವಳಿ ಟೈಮ್ಸ್) : ಕಳೆದ 26 ವರ್ಷಗಳಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಡೋರಿಕ್ ಸಿಕ್ವೇರಾ ಅವರು ಸರಕಾರಿ ಸೇವೆಯಿಂದ ಆಗಸ್ಟ್ 30ರಂದು ನಿವೃತ್ತರಾದರು.
ಇಲಾಖೆಯಲ್ಲಿ ಚಾಲಕರಾಗಿ 1999ರಲ್ಲಿ ನೇಮಕಗೊಂಡ ಇವರು, ಚಿಕ್ಕಮಗಳೂರು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ನಿವೃತ್ತಿ ಹಿನ್ನೆಲೆಯಲ್ಲಿ ಶನಿವಾರ ವಾರ್ತಾ ಇಲಾಖೆ ಕಚೇರಿಯಲ್ಲಿ ಡೋರಿಕ್ ಸಿಕ್ವೇರಾ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.
ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್, ಜಿಲ್ಲಾ ವಾರ್ತಾಧಿಕಾರಿ ಬಿ ಎ ಖಾದರ್ ಶಾ, ಹಿರಿಯ ಪತ್ರಕರ್ತ ಪುಷ್ಪರಾಜ್, ವಾರ್ತಾ ಇಲಾಖೆ ಸಿಬ್ಬಂದಿಗಳು ಭಾಗವಹಿಸಿದ್ದರು.































0 comments:
Post a Comment