ಬೆಳ್ತಂಗಡಿ, ಆಗಸ್ಟ್ 08, 2025 (ಕರಾವಳಿ ಟೈಮ್ಸ್) : ಬೆಳ್ತಂಗಡಿ ನಿವಾಸಿ ಚರಣ್ ಶೆಟ್ಟಿ ಎಂಬವರು ಮೊಬೈಲಿನಲ್ಲಿ ಸಾಮಾಜಿಕ ಜಾಲತಾಣ ಪರಿಶೀಲಿಸುತ್ತಿದ್ದ ವೇಳೆ ಆರೋಪಿ ಗಿರೀಶ್ ಮಟ್ಟಣ್ಣವರ್ ಅವರು ಬುಧವಾರ ಫೇಸ್ ಬುಕ್ಕಿನಲ್ಲಿ ಅಪರಾಧಿಕ ಕೃತ್ಯಗಳನ್ನು ನಡೆಸಲು ದುಷ್ಪ್ರೇರಣೆಯಾಗುವಂತೆ, ಅಶ್ಲೀಲವಾಗಿ ಹಾಗೂ ಸಾರ್ವಜನಿಕರಿಗೆ ಕಿರಿ ಕಿರಿಯುಂಟಾಗುವ ರೀತಿಯಲ್ಲಿ ಮಾತನಾಡಿರುವ ವೀಡಿಯೋ ಪ್ರಸಾರಮಾಡಿರುವುದು ಕಂಡುಬಂದಿರುತ್ತದೆ. ಎಂಬುದಾಗಿ ನೀಡಿದ ದೂರಿನ ಮೇರೆಗೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 78/2025 ಕಲಂ 57, 296 ಜೊತೆಗೆ 190 ಬಿ ಎನ್ ಎಸ್-2023 ರಂತೆ ಪ್ರಕರಣ ದಾಖಲಾಗಿದೆ.
ಅದೇ ರೀತಿ ಗುರುವಾರ ಸಾಮಾಜಿಕ ಜಾಲತಾಣದಲ್ಲಿ ಸಂದೇಶಗಳನ್ನು ನೋಡುತ್ತಿದ್ದಾಗ, ಆರೋಪಿ ಮಹೇಶ್ ತಿಮರೋಡಿರವರು ಸಾಮಾಜಿಕ ಜಾಲತಾಣವಾದ ಯೂಟ್ಯೂಬ್ ನಲ್ಲಿ, ಪ್ರಾದೇಶಿಕವಾಗಿ ಜನರ ನಡುವೆ ವೈಮನಸ್ಸು ಉಂಟಾಗುವಂತಹ ಹಾಗೂ ಸಾರ್ವಜನಿಕರಲ್ಲಿ ಅಪಾಯದ ಬೀತಿಯನ್ನುಂಟು ಮಾಡುವಂತಹ ಹೇಳಿಕೆಗಳನ್ನು ಪ್ರಚಾರ ಮಾಡಿರುವುದು ಕಂಡುಬಂದಿರುತ್ತದೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 79/2025 ಕಲಂ 353(2) ಬಿ ಎನ್ ಎಸ್-2023 ರಂತೆ ಪ್ರಕರಣ ದಾಖಲಾಗಿದೆ.
0 comments:
Post a Comment