ಯೂಟ್ಯೂಬಿನಲ್ಲಿ ಆಶ್ಲೀಲ ವೀಡಿಯೋ ಪ್ರಸಾರ : ಪುನೀತ್ ಕೆರೆಹಳ್ಳಿ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು - Karavali Times ಯೂಟ್ಯೂಬಿನಲ್ಲಿ ಆಶ್ಲೀಲ ವೀಡಿಯೋ ಪ್ರಸಾರ : ಪುನೀತ್ ಕೆರೆಹಳ್ಳಿ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು - Karavali Times

728x90

7 August 2025

ಯೂಟ್ಯೂಬಿನಲ್ಲಿ ಆಶ್ಲೀಲ ವೀಡಿಯೋ ಪ್ರಸಾರ : ಪುನೀತ್ ಕೆರೆಹಳ್ಳಿ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ, ಆಗಸ್ಟ್ 08, 2025 (ಕರಾವಳಿ ಟೈಮ್ಸ್) : ಆರೋಪಿ ಪುನೀತ್ ಕೆರೆಹಳ್ಳಿ ಎಂಬಾತ ಯೂಟ್ಯೂಬಿನಲ್ಲಿ ಆಶ್ಲೀಲವಾಗಿ ಮಾತನಾಡಿರುವ ವೀಡಿಯೋ ಪ್ರಸಾರ ಮಾಡಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಈ ಬಗ್ಗೆ ಬೆಳ್ತಂಗಡಿ ಕಸಬಾ ಗ್ರಾಮದ ನಿವಾಸಿ ಜೆರೋಮ್ ಬರ್ಬೋಝಾ (37) ಎಂಬವರ ಪೊಲೀಸರಿಗೆ ದೂರು ನೀಡಿದ್ದು, ಆಗಸ್ಟ್ 7 ರಂದು ಇವರು ತನ್ನ ಮೊಬೈಲಿನಲ್ಲಿ ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ಕಿನಲ್ಲಿ  ಸಂದೇಶಗಳನ್ನು ಪರಿಶೀಲಿಸುತ್ತಿರುವಾಗ, ಆರೋಪಿ ಪುನೀತ್ ಕೆರೆಹಳ್ಳಿ ಎಂಬಾತ ಯೂಟ್ಯೂಬಿನಲ್ಲಿ ಅಶ್ಲೀಲವಾಗಿ ಮಾತನಾಡಿರುವ ವೀಡಿಯೋವನ್ನು ಪ್ರಸಾರ ಮಾಡಿರುವುದು ಕಂಡುಬಂದಿರುತ್ತದೆ ಎಂಬುದಾಗಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 80/2025, ಕಲಂ 296 ಬಿ ಎನ್ ಎಸ್-2023 ಪ್ರಕಾರ ಪ್ರಕರಣ ದಾಖಲಾಗಿದೆ.

  • Blogger Comments
  • Facebook Comments

0 comments:

Post a Comment

Item Reviewed: ಯೂಟ್ಯೂಬಿನಲ್ಲಿ ಆಶ್ಲೀಲ ವೀಡಿಯೋ ಪ್ರಸಾರ : ಪುನೀತ್ ಕೆರೆಹಳ್ಳಿ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು Rating: 5 Reviewed By: karavali Times
Scroll to Top