ಬಂಟ್ವಾಳ, ಆಗಸ್ಟ್ 27, 2025 (ಕರಾವಳಿ ಟೈಮ್ಸ್) : ಬಂಟ್ವಾಳ ತಾಲೂಕಿನ ಫರಂಗಿಪೇಟೆ ಹಿಂದೂ ಧಾರ್ಮಿಕ ಸೇವಾ ಸಮಿತಿ ಕೃಷ್ಣನಗರ-ಫರಂಗಿಪೇಟೆ ಇದರ ವತಿಯಿಂದ ಆಚರಿಸುವ 43ನೇ ವರ್ಷದ ಫರಂಗಿಪೇಟೆ ಗಣೇಶೋತ್ಸವ ಕಾರ್ಯಕ್ರಮಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಧ್ವಜಾರೋಹಣ ಮಾಡುವ ಮೂಲಕ ಚಾಲನೆ ನೀಡಿದರು.
ಬಳಿಕ ಸಾರ್ವಜನಿಕ ಉಪಯೋಗಕ್ಕೆ ಅಂಬ್ಯುಲೆನ್ಸ್ ವಾಹನವನ್ನು ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಅವರು ಲೋಕಾರ್ಪಣೆ ಮಾಡಿದರು. ಕುಂದಾಪುರದ ಸಹಾಯಕ ಕಮೀಷನರ್ ರಶ್ಮಿ ಎಸ್ ಆರ್ ಉಪಸ್ಥಿತರಿದ್ದರು. ಇದೇ ಸಂದರ್ಭ ಭಕ್ತರಿಗೆ ಭತ್ತದ ತೆನೆಯನ್ನು ವಿತರಿಸಲಾಯಿತು. ಹಾಗೂ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು. ಸೇವಾ ಪ್ರತಿಷ್ಠಾನದ ಸ್ಥಾಪಕ ಕೃಷ್ಣಕುಮಾರ್ ಪೂಂಜಾ ಹಾಗೂ ಪ್ರಮುಖರು ಭಾಗವಹಿಸಿದ್ದರು.
0 comments:
Post a Comment