ಮಂಗಳೂರು, ಆಗಸ್ಟ್ 21, 2025 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯ ಮೀನುಗಾರರಿಗೆ ಹೊಸದಾಗಿ ಯಾಂತ್ರೀಕೃತ ಮೀನುಗಾರಿಕಾ ದೋಣಿ ನಿರ್ಮಾಣ ಮಾಡಿ ಮೀನುಗಾರಿಕೆಯಲ್ಲಿ ತೊಡಗಿಸಿಕೊಳ್ಳಲು ಅನುವಾಗುವಂತೆ ಸಾಧ್ಯತಾ ಪತ್ರ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ವೆಬ್‍ಸೈಟ್ URL:frims.karnataka.gov.in/BCC ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿದಾರರು ಫ್ರೂಟ್ಸ್ ಐಡಿ ಕಡ್ಡಾಯವಾಗಿ ಹೊಂದಿರಬೇಕು ಹಾಗೂ ಮೀನುಗಾರಿಕೆ ವೃತ್ತಿಯಲ್ಲಿ ತೊಡಗಿದವರಾಗಿರಬೇಕು ಅಥವಾ ಮೀನುಗಾರಿಕೆ ಸಹಕಾರಿ ಸಂಘದ ಸದಸ್ಯರಾಗಿರಬೇಕು. ಅರ್ಜಿಯಲ್ಲಿ ತಿಳಿಸಲಾಗಿರುವ ದಾಖಲಾತಿಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಅರ್ಜಿದಾರರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಅರ್ಜಿಯ 1 ಪ್ರತಿಯನ್ನು ಎಲ್ಲಾ ಮೂಲ ದಾಖಲಾತಿಗಳೊಂದಿಗೆ ಸದಸ್ಯ ಕಾರ್ಯದರ್ಶಿ/ ಮೀನುಗಾರಿಕೆ ಉಪನಿರ್ದೇಶಕರು, ದ.ಕ. ಜಿಲ್ಲಾ ಪಂಚಾಯತ್ ಕಚೇರಿ ಕಟ್ಟಡ, ಮಂಗಳೂರು ವಿಳಾಸಕ್ಕೆ ಕಡ್ಡಾಯವಾಗಿ ಸಲ್ಲಿಸಬೇಕು.
ಈ ಬಗ್ಗೆ ಹೆಚ್ಚಿನ ಮಾಹಿತಿಗೆ ಹತ್ತಿರದ ಮೀನುಗಾರಿಕೆ ಇಲಾಖೆ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 comments:
Post a Comment