ಸೆಪ್ಟೆಂಬರ್ 3 ರಂದು ಕಿರು ಆಹಾರ ಸಂಸ್ಕರಣಾ ಅರಿವು ತರಬೇತಿ ಕಾರ್ಯಕ್ರಮ - Karavali Times ಸೆಪ್ಟೆಂಬರ್ 3 ರಂದು ಕಿರು ಆಹಾರ ಸಂಸ್ಕರಣಾ ಅರಿವು ತರಬೇತಿ ಕಾರ್ಯಕ್ರಮ - Karavali Times

728x90

16 August 2025

ಸೆಪ್ಟೆಂಬರ್ 3 ರಂದು ಕಿರು ಆಹಾರ ಸಂಸ್ಕರಣಾ ಅರಿವು ತರಬೇತಿ ಕಾರ್ಯಕ್ರಮ

ಮಂಗಳೂರು, ಆಗಸ್ಟ್ 16, 2025 (ಕರಾವಳಿ ಟೈಮ್ಸ್) : ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ದ.ಕ. ಜಿಲ್ಲೆ ಮತ್ತು ಕೆಪೆಕ್ ಸಂಸ್ಥೆ, ಬೆಂಗಳೂರು ಇವರ ಸಹಯೋಗದೊಂದಿಗೆ ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ದಗೊಳಿಸುವಿಕೆ ಯೋಜನೆ ಬಗ್ಗೆ ಏಕದಿನ ಅರಿವು ಮೂಡಿಸುವ ಕಾರ್ಯಕ್ರಮ ಸೆಪ್ಟೆಂಬರ್ 3 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ.

ಯೋಜನೆಯಡಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಸ್ಥಾಪನೆ/ ಅಭಿವೃದ್ದಿ ಯೋಜನೆಯಡಿಯಲ್ಲಿ ಶೇ. 50ರಷ್ಟು ಅಥವಾ ಗರಿಷ್ಟ 15 ಲಕ್ಷ ರೂಪಾಯಿ ಸಹಾಯಧನ (ಕೇಂದ್ರ ಸರ್ಕಾರದ 6 ಲಕ್ಷ ಹಾಗೂ ರಾಜ್ಯ ಸರ್ಕಾರದ ವತಿಯಿಂದ 9 ಲಕ್ಷ ರೂಪಾಯಿ ಸಹಾಯಧನ ನೀಡಿಕೆ) ವೈಯುಕ್ತಿಕ ಕಿರು ಉದ್ದಿಮೆಗಳಿಗೆ ಹಾಗೂ ರೈತ ಉತ್ಪಾದಕ ಸಂಸ್ಥೆಗಳು (ಎಫ್ ಪಿ ಒ)/ ಉತ್ಪಾದಕ ಸೊಸೈಟಿಗಳಿಗೆ ಸಹಾಯಧನ - ಪ್ರತಿ ಘಟಕಕ್ಕೆ ಶೇ. 35ರಷ್ಟು (ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುಪಾತ 60:40) ಮೌಲ್ಯದ ಸಾಲ ಸಂಪರ್ಕವಿರುವ ಸಹಾಯಧನ ಹಾಗೂ ರಾಜ್ಯ ಸರ್ಕಾರದ ವತಿಯಿಂದ ಶೇ. 15ರಷ್ಟು (ಗರಿಷ್ಟ 5 ಲಕ್ಷ ರೂಪಾಯಿ) ಹೆಚ್ಚುವರಿ ಸಹಾಯಧನ, ಅಲ್ಲದೆ ಸ್ವಸಹಾಯ ಸಂಘಗಳ ಸದಸ್ಯರಿಗೆ ಕಾರ್ಯನಿರ್ವಹಣಾ ಬಂಡವಾಳ ಹಾಗೂ ಚಿಕ್ಕ ಸಲಕರಣೆಗಳನ್ನು ಖರೀದಿಸಲು 40 ಸಾವಿರ ರೂಪಾಯಿ ಪ್ರಾಥಮಿಕ ಬಂಡವಾಳ ನೀಡಿಕೆ ಈ ಯೋಜನೆಯಲ್ಲಿ ಲಭ್ಯವಿದೆ.

ಜಿಲ್ಲೆಯ ಎಲ್ಲಾ ರೈತರು/ ಉದ್ದಿಮೆದಾರರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಸೆಪ್ಟೆಂಬರ್ 3 ರಂದು ಕಿರು ಆಹಾರ ಸಂಸ್ಕರಣಾ ಅರಿವು ತರಬೇತಿ ಕಾರ್ಯಕ್ರಮ Rating: 5 Reviewed By: karavali Times
Scroll to Top