ಮಂಗಳೂರು, ಆಗಸ್ಟ್ 25, 2025 (ಕರಾವಳಿ ಟೈಮ್ಸ್) : ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ದ.ಕ. ಜಿಲ್ಲೆ ಮತ್ತು ಕೆಪೆಕ್ ಸಂಸ್ಥೆ, ಬೆಂಗಳೂರು ಇವರ ಸಹಯೋಗದೊಂದಿಗೆ ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ದಗೊಳಿಸುವಿಕೆ ಯೋಜನೆ ಕುರಿತು ಸೆಪ್ಟೆಂಬರ್ 3 ರಂದು ಬೆಳಗ್ಗೆ 10 ಗಂಟೆಗೆ ಒಂದು ದಿನದ ಜಿಲ್ಲಾ ಮಟ್ಟದ ಅರಿವು ಮೂಡಿಸುವ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಯೋಜನೆಯಡಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಸ್ಥಾಪನೆ/ ಅಭಿವೃದ್ದಿ ಯೋಜನೆಯಡಿಯಲ್ಲಿ ಶೇ. 50ರಷ್ಟು ಅಥವಾ ಗರಿಷ್ಟ 15 ಲಕ್ಷ ರೂಪಾಯಿವರೆಗೆ ಸಹಾಯಧನ (ಕೇಂದ್ರ ಸರ್ಕಾರದ 6 ಲಕ್ಷ ಹಾಗೂ ರಾಜ್ಯ ಸರ್ಕಾರದ ವತಿಯಿಂದ 9 ಲಕ್ಷ ಸಹಾಯಧನ ನೀಡಿಕೆ). ವೈಯುಕ್ತಿಕ ಕಿರು ಉದ್ದಿಮೆಗಳಿಗೆ ಹಾಗೂ ರೈತ ಉತ್ಪಾದಕ ಸಂಸ್ಥೆಗಳು (ಎಫ್ ಪಿ ಒ)/ ಉತ್ಪಾದಕಾ ಸೊಸೈಟಿಗಳಿಗೆ ಸಹಾಯಧನ ಪ್ರತಿ ಘಟಕಕ್ಕೆ ಶೇ. 35ರಷ್ಟು (ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುಪಾತ 60:40) ಮೌಲ್ಯದ ಸಾಲ ಸಂಪರ್ಕವಿರುವ ಸಹಾಯಧನ ಹಾಗೂ ರಾಜ್ಯ ಸರ್ಕಾರದ ವತಿಯಿಂದ ಶೇ. 15ರಷ್ಟು ಹೆಚ್ಚುವರಿ ಸಹಾಯ ಧನ. (ಒಟ್ಟು ಸಹಾಯ ಧನ ಗರಿಷ್ಟ 15 ಲಕ್ಷ) ಹಾಗೂ ಸ್ವಸಹಾಯ ಸಂಘಗಳ ಸದಸ್ಯರಿಗೆ ಕಾರ್ಯನಿರ್ವಹಣಾ ಬಂಡವಾಳ ಹಾಗೂ ಚಿಕ್ಕ ಸಲಕರಣೆಗಳನ್ನು ಖರೀದಿಸಲು 40 ಸಾವಿರ ರೂಪಾಯಿ ಪ್ರಾಥಮಿಕ ಬಂಡವಾಳ ನೀಡಿಕೆ ಈ ಯೋಜನೆಯ ಪ್ರಮುಖ ಘಟಕಗಳಾಗಿದ್ದು ಸಹಾಯ ಧನದೊಂದಿಗೆ ಶೇ. 3ರಷ್ಟು ಬಡ್ಡಿ ಸಹಾಯ ಧನದ ಸೌಲಭ್ಯವಿರುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ರೈತರು/ಉದ್ದಿಮೆದಾರರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು ಎಂದು ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟನೆ ತಿಳಿಸಿದೆ.













0 comments:
Post a Comment