ಮಂಗಳೂರು, ಆಗಸ್ಟ್ 29, 2025 (ಕರಾವಳಿ ಟೈಮ್ಸ್) : ಮಂಗಳೂರು ಸಿಸಿಬಿ ಪೊಲೀಸರ ಮಹತ್ವದ ಕಾರ್ಯಾಚರಣೆಯಲ್ಲಿ ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಸರಬರಾಜು ಮಾಡುತ್ತಿದ್ದ ವ್ಯಕ್ತಿಯೋರ್ವ ಬಲೆಗೆ ಬಿದ್ದಿದ್ದಾನೆ.
ಬಂಧಿತ ಆರೋಪಿಯನ್ನು ಮೂಲತಃ ಕೇರಳ ರಾಜ್ಯದ ಎರ್ನಾಕುಲಂ ಜಿಲ್ಲೆಯ, ಕೊಚ್ಚಿ-ಮಟ್ಟಂಚೇರಿ ಮೌಲಾನಾ ಅಝಾದ್ ರಸ್ತೆ ನಿವಾಸಿ, ಪ್ರಸ್ತುತ ಮಂಗಳೂರು-ದೇರಳಕಟ್ಟೆಯ ಬೆರ್ರಿಸ್ ಲಿಯೋ ಬ್ಲಾಕ್ ಅಪಾರ್ಟ್ ಮೆಂಟ್ 10ನೇ ಮಹಡಿಯ ಫ್ಲಾಟ್ ಸಂಖ್ಯೆ 1012 ರಲ್ಲಿ ವಾಸವಾಗಿರುವ ಮೊಹಮ್ಮದ್ ಅರ್ಶದ್ ಖಾನ್ ಬಿನ್ ನಝೀರ್ ಅಹ್ಮದ್ ಖಾನ್ (29) ಎಂದು ಹೆಸರಿಸಲಾಗಿದೆ.
ಆರೋಪಿಯು ನಿಷೇದಿತ ಮಾದಕ ವಸ್ತುವಾದ ಎಂಡಿಎಂಎನ್ನು ಬೆಂಗಳೂರಿನಿಂದ ಖರೀದಿಸಿಕೊಂಡು ಮಂಗಳೂರು ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಎಂ.ಡಿ.ಎಂ.ಎ, ಹೈಡ್ರೋವಿಡ್ ಗಾಂಜಾ ಮತ್ತು ಎಂ.ಡಿ.ಎಂ.ಎ ಪಿಲ್ಸ್ ಅನ್ನು ಸರಬರಾಜು ಮಾಡುತ್ತಿದ್ದ ಎನ್ನಲಾಗಿದ್ದು, ಈತನಿಂದ 53.29 ಗ್ರಾಂ ಎಂಡಿಎಂಎ ಮತ್ತು 2.33 ಗ್ರಾಂ ಹೈಡ್ರೋವೀಡ್ ಗಾಂಜಾ ಮತ್ತು 0.45 ಗ್ರಾಂ ಎಂ.ಡಿ.ಎಂ.ಎ ಪಿಲ್ಸ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಮಂಗಳೂರು ನಗರಕ್ಕೆ ಬೆಂಗಳೂರು ನಗರದಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎನ್ನು ಖರೀದಿ ಮಾಡಿಕೊಂಡು ಅದನ್ನು ಮಂಗಳೂರು ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ದೇರಳಕಟ್ಟೆಯ ಪರಿಸರದಲ್ಲಿ ನಿಂತುಕೊಂಡು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಶುಕ್ರವಾರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತನಿಂದ ವಶಪಡಿಸಿಕೊಂಡ ಮಾದಕ ವಸ್ತುಗಳ ಅಂದಾಜು ಮೌಲ್ಯ 10.85 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದ್ದು, ಡಿಜಿಟಲ್ ತೂಕ ಮಾಪನ, ಮೊಬೈಲ್ ಪೊನ್ ಸೇರಿ ಸಹಿತ ಒಟ್ಟು 11.05 ಲಕ್ಷ ರೂಪಾಯಿ ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಕೊಣಾಜೆ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರುತ್ತದೆ.
ಈ ಮಾದಕ ವಸ್ತು ಮಾರಾಟ/ ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಇವರ ಬಗ್ಗೆಯು ಮಹತ್ವದ ಸುಳಿವು ಲಭ್ಯವಾಗಿದ್ದು, ಎಲ್ಲ ಆರೋಪಿಗಳನ್ನೂ ಶೀಘ್ರದಲ್ಲಿ ಬಂಧಿಸಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ.
0 comments:
Post a Comment