ಬಂಟ್ವಾಳ, ಆಗಸ್ಟ್ 29, 2025 (ಕರಾವಳಿ ಟೈಮ್ಸ್) : ಕಾರು ಡಿಕ್ಕಿ ಹೊಡೆದು ಅಟೋ ರಿಕ್ಷಾ ಚಾಲಕ ಗಾಯಗೊಂಡ ಘಟನೆ ನಾವೂರು ಗ್ರಾಮದ ಹಂಚಿಕಟ್ಟೆ ಎಂಬಲ್ಲಿ ಆಗಸ್ಟ್ 28 ರಂದು ಸಂಭವಿಸಿದೆ.
ಗಾಯಗೊಂಡ ಅಟೋ ರಿಕ್ಷಾ ಚಾಲಕನನ್ನು ಕಾವಳಪಡೂರು ಗ್ರಾಮದ ವಗ್ಗ ಸಮೀಪದ ಪಟ್ಟಾಜೆ ನಿವಾಸಿ ಭವಾನಿ ಶಂಕರ (42) ಎಂದು ಹೆಸರಿಸಲಾಗಿದೆ. ಇವರು ತನ್ನ ಅಟೋ ರಿಕ್ಷಾದಲ್ಲಿ ಬಂಟ್ವಾಳದಿಂದ ಕಾವಳಪಡೂರಿಗೆ ಬಂಟ್ವಾಳ-ಕಡೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ವೇಳೆ ಹಂಚಿಕಟ್ಟೆ ಎಂಬಲ್ಲಿ ಬೆಳ್ತಂಗಡಿ ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದಿಂದ ಅಟೋ ಚಾಲಕ ಭವಾನಿ ಶಂಕರ್ ರಿಕ್ಷಾದಿಂದ ಹೊರಗೆಸೆಯಲ್ಪಟ್ಟು ರಸ್ತೆಗೆ ಬಿದ್ದು ಭುಜ, ಕೈ ಹಾಗೂ ಎದೆ ಭಾಗಕ್ಕೆ ಗಾಯಗಳಾಗಿವೆ. ಅವರನ್ನು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment