2012 ರಲ್ಲಿ ಧರ್ಮಸ್ಥಳಕ್ಕೆ ತೆರಳಿ ಬಳಿಕ ನಾಪತ್ತೆಯಾಗಿರುವ ಹೇಮಲತಾ : ತನಿಖೆ ನಡೆಸುವಂತೆ ಸಹೋದರನಿಂದ ಪೂಂಜಾಲಕಟ್ಟೆ ಪೊಲೀಸರಿಗೆ ದೂರು - Karavali Times 2012 ರಲ್ಲಿ ಧರ್ಮಸ್ಥಳಕ್ಕೆ ತೆರಳಿ ಬಳಿಕ ನಾಪತ್ತೆಯಾಗಿರುವ ಹೇಮಲತಾ : ತನಿಖೆ ನಡೆಸುವಂತೆ ಸಹೋದರನಿಂದ ಪೂಂಜಾಲಕಟ್ಟೆ ಪೊಲೀಸರಿಗೆ ದೂರು - Karavali Times

728x90

14 August 2025

2012 ರಲ್ಲಿ ಧರ್ಮಸ್ಥಳಕ್ಕೆ ತೆರಳಿ ಬಳಿಕ ನಾಪತ್ತೆಯಾಗಿರುವ ಹೇಮಲತಾ : ತನಿಖೆ ನಡೆಸುವಂತೆ ಸಹೋದರನಿಂದ ಪೂಂಜಾಲಕಟ್ಟೆ ಪೊಲೀಸರಿಗೆ ದೂರು

ಬಂಟ್ವಾಳ, ಆಗಸ್ಟ್ 14, 2025 (ಕರಾವಳಿ ಟೈಮ್ಸ್) : 2012 ರಲ್ಲಿ ಧರ್ಮಸ್ಥಳ ದೇವಸ್ಥಾನಕ್ಕೆ ತೆರಳಿದ ಕುಮಾರಿ ಹೇಮಲತಾ (17) ಎಂಬಾಕೆ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸುವಂತೆ ಆಕೆಯ ಸಹೋದರ ಕಾವಳಮೂಡೂರು ನಿವಾಸಿ ನಿತಿನ್ ದೇವಾಡಿಗ ಎಂಬವರು ಗುರುವಾರ ಪೂಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. 

ಕುಮಾರಿ ಹೇಮಲತಾ 2012 ರಲ್ಲಿ ಧರ್ಮಸ್ಥಳ ದೇವಸ್ಥಾನಕ್ಕೆ ತೆರಳಿದವರು, ಆ ಬಳಿಕ ಮನೆಗೆ ಹಿಂತಿರುಗಿ ಬಂದಿರುವುದಿಲ್ಲ. ಪ್ರಸ್ತುತ ಧರ್ಮಸ್ಥಳದಲ್ಲಿ ನಡೆಯುತ್ತಿರುವ ವಿಧ್ಯಾಮಾನಗಳನ್ನು ಕಂಡು ನಾಪತ್ತೆಯಾಗಿರುವ ತನ್ನ ಸಹೋದರಿಯ ಬಗ್ಗೆ ತನಿಖೆ ನಡೆಸುವಂತೆ ನಿತಿನ್ ಪೂಂಜಾಲಕಟ್ಟೆ ಪೊಲೀಸ್ ಠಾಣೆಗೆ ನೀಡಿರುವ ದೂರರ್ಜಿಯನ್ನು ಪೊಲೀಸರು ಸ್ವೀಕರಿಸಿದ್ದು, ವಿಚಾರಣೆ ಕೈಗೊಂಡಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: 2012 ರಲ್ಲಿ ಧರ್ಮಸ್ಥಳಕ್ಕೆ ತೆರಳಿ ಬಳಿಕ ನಾಪತ್ತೆಯಾಗಿರುವ ಹೇಮಲತಾ : ತನಿಖೆ ನಡೆಸುವಂತೆ ಸಹೋದರನಿಂದ ಪೂಂಜಾಲಕಟ್ಟೆ ಪೊಲೀಸರಿಗೆ ದೂರು Rating: 5 Reviewed By: karavali Times
Scroll to Top