ಮನೆ ಕಳ್ಳತನ ಪ್ರಕರಣ ಬೇಧಿಸಿ ಆರೋಪಿ ಬಂಧಿಸಿದ ಪುತ್ತೂರು ಪೊಲೀಸರು, ಸೊತ್ತುಗಳು ವಶಕ್ಕೆ - Karavali Times ಮನೆ ಕಳ್ಳತನ ಪ್ರಕರಣ ಬೇಧಿಸಿ ಆರೋಪಿ ಬಂಧಿಸಿದ ಪುತ್ತೂರು ಪೊಲೀಸರು, ಸೊತ್ತುಗಳು ವಶಕ್ಕೆ - Karavali Times

728x90

17 August 2025

ಮನೆ ಕಳ್ಳತನ ಪ್ರಕರಣ ಬೇಧಿಸಿ ಆರೋಪಿ ಬಂಧಿಸಿದ ಪುತ್ತೂರು ಪೊಲೀಸರು, ಸೊತ್ತುಗಳು ವಶಕ್ಕೆ

ಪುತ್ತೂರು, ಆಗಸ್ಟ್ 17, 2025 (ಕರಾವಳಿ ಟೈಮ್ಸ್) : ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಆಗಸ್ಟ್ 12 ರಂದು ನಡೆದ ಕಳ್ಳತನ ಪ್ರಕರಣವನ್ನು ಪೊಲೀಸರು ಬೇಧಿಸಿ ಆರೋಪಿಯನ್ನು ಸೊತ್ತುಗಳ ಸಹಿತ ಬಂಧಿಸಿದ್ದಾರೆ. 

ಬಂಧಿತ ಆರೋಪಿಯನ್ನು ನೆಟ್ಟಣಿಗೆ ಮುಡ್ನೂರು ಗ್ರಾಮದ ನಿವಾಸಿ ದಯಾನಂದ ನಾಯ್ಕ ಎಂ (29) ಎಂದು ಹೆಸರಿಸಲಾಗಿದೆ. ಈತನನ್ನು ಪುತ್ತೂರಿನ ಈಶ್ವರ ಮಂಗಲದಲ್ಲಿ ಬಂಧಿಸಲಾಗಿದೆ. ಬಂಧಿತ ಆರೋಪಿಯಿಂದ 30.120 ಗ್ರಾಂ ಬಂಗಾರ ಹಾಗೂ ಕೃತ್ಯಕ್ಕೆ ಉಪಯೋಗಿಸಿದ ಡಿಸ್ಕವರಿ ಬೈಕ್ ವಶಪಡಿಸಿಕೊಳ್ಳಲಾಗಿದೆ. 

ಮನೆಯೊಂದರಲ್ಲಿ ಆ 12 ರಂದು ಸುಮಾರು 31 ಗ್ರಾಂ ಬಂಗಾರ ಮತ್ತು 5 ಸಾವಿರ ರೂಪಾಯಿ ನಗದು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 83/2025 ಕಲಂ 305 ಭಾರತೀಯ ನ್ಯಾಯ ಸಂಹಿತೆ-2023ರಂತೆ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ಕೈಗೊಂಡ ಪೊಲೀಸರು ಪ್ರಕರಣ ಬೇಧಿಸಿ ಆರೋಪಿಯನ್ನು ಸೊತ್ತುಗಳ ಸಹಿತ ಬಂಧಿಸಿದ್ದಾರೆ. 

ಪ್ರಕರಣದ ಆರೋಪಿ ಪತ್ತೆ ಕಾರ್ಯದಲ್ಲಿ, ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಅರುಣ್ ನಾಗೇಗೌಡ ಮತ್ತು ಪೊಲೀಸ್ ನಿರೀಕ್ಷಕ ರವಿ ಬಿ ಎಸ್ ಅವರ ಮಾರ್ಗದರ್ಶನದಲ್ಲಿ, ಪುತ್ತೂರು ಗ್ರಾಮಾಂತರ ಠಾಣಾ ಉಪನಿರೀಕ್ಷಕ ಜಂಬುರಾಜ್ ಮಹಾಜನ್ ಅವರ ನೇತೃತ್ವದಲ್ಲಿ ಎಎಸೈ ಚಂದ್ರಶೇಖರ್, ಸಿಬ್ಬಂದಿಗಳಾದ ಪ್ರವೀಣ್, ಮಧು, ಹರೀಶ್, ಸುಬ್ರಹ್ಮಣ್ಯ, ಆಕಾಶ್, ಯುವರಾಜ್, ಶರಣಪ್ಪ ಪಾಟೀಲ್, ಯಜ್ಞ, ಹರಿಪ್ರಸಾದ್ ಮತ್ತು ನಿತೇಶ್ ಅವರನ್ನೊಳಗೊಂಡ ತಂಡ ಕಾರ್ಯಾಚರಣೆ ನಡೆಸಿದೆ.

  • Blogger Comments
  • Facebook Comments

0 comments:

Post a Comment

Item Reviewed: ಮನೆ ಕಳ್ಳತನ ಪ್ರಕರಣ ಬೇಧಿಸಿ ಆರೋಪಿ ಬಂಧಿಸಿದ ಪುತ್ತೂರು ಪೊಲೀಸರು, ಸೊತ್ತುಗಳು ವಶಕ್ಕೆ Rating: 5 Reviewed By: karavali Times
Scroll to Top