ಬಂಟ್ವಾಳ, ಆಗಸ್ಟ್ 15, 2025 (ಕರಾವಳಿ ಟೈಮ್ಸ್) : ಹಿರಿಯರ ಹೋರಾಟದ ಫಲದಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಇಲ್ಲದಿದ್ದರೆ ಇಂದಿಗೂ ನಾವು ಬ್ರಿಟಿಷರ ಅಡಿಯಾಳಾಗಿರಬೇಕಿತ್ತು. ಆದರೆ ಈಗ ದೇಶದ ರಕ್ಷಣೆಗೆ ಬೇಕಾಗುವಂತಹ ಯುದ್ದೋಪಯೋಗಿ ಯಂತ್ರಗಳನ್ನು ನಮ್ಮ ದೇಶದಲ್ಲಿಯೇ ತಯಾರಿಸುವಷ್ಟು ಮುಂದುವರಿದಿರುವುದು ನಮಗೆಲ್ಲ ಹೆಮ್ಮೆಯಾಗಿದೆ ಎಂದು ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷ ರಮೇಶ್ ಸಾಲ್ಯಾನ್ ಹೇಳಿದರು.
ಬಿ ಸಿ ರೋಡಿನ ಪೆÇಸಳ್ಳಿ ಕುಲಾಲ ಭವನದಲ್ಲಿ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣಗೈದು ಅವರು ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಉದ್ಯಮಿ ಚಂದ್ರಶೇಖರ ಕುಲಾಲ್ ಭಾಗವಹಿಸಿದ್ದರು. ಸಂಘದ ಉಪಾಧ್ಯಕ್ಷೆ ಜಲಜಾಕ್ಷಿ ಪಾಣೆಮಂಗಳೂರು, ಕೋಶಾಧಿಕಾರಿ ಸೋಮನಾಥ ಸಾಲ್ಯಾನ್, ಮಹಿಳಾ ಘಟಕದ ಅಧ್ಯಕ್ಷೆ ಆಶಾ ಗಿರಿಧರ್, ಸೇವಾದಳ ದಳಪತಿ ಜಯಂತ ಅಗ್ರಬೈಲು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಯಾದವ ಅಗ್ರಬೈಲು ಕಾರ್ಯಕ್ರಮ ನಿರೂಪಿಸಿದರು. ಜೊತೆ ಕಾರ್ಯದರ್ಶಿ ಮೀನಾಕ್ಷಿ ಪದ್ಮನಾಭ ವಂದಿಸಿದರು.



























0 comments:
Post a Comment