ಬೋಳಂಗಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ - Karavali Times ಬೋಳಂಗಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ - Karavali Times

728x90

15 August 2025

ಬೋಳಂಗಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಬಂಟ್ವಾಳ, ಆಗಸ್ಟ್ 15, 2025 (ಕರಾವಳಿ ಟೈಮ್ಸ್) : ಬೋಳಂಗಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ  ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ಬುಶ್ರಾ ಸಲಾಂ ಧ್ವಜಾರೋಹಣಗೈದರು. 

ಮುಖ್ಯ ಅತಿಥಿಯಾಗಿದ್ದ ಪತ್ರಕರ್ತ ಸಲೀಂ ಬೋಳಂಗಡಿ ಮಾತನಾಡಿ, ಸಮಾಜದಲ್ಲಿ ಸಹೋದರತೆ, ಭಾವೈಕ್ಯತೆ ಕಡಿಮೆಯಾಗುತ್ತಿದೆ. ನಮ್ಮ ಸ್ವಾತಂತ್ರ್ಯದ ಹೋರಾಟಗಾರರು ಜಾತಿ ಮತ ಭೇದವಿಲ್ಲದೆ ಈ ದೇಶಕ್ಕೆ ಸ್ವಾತಂತ್ರ್ಯವನ್ನು ಗಳಿಸಿಕೊಟ್ಟರು. ಅದನ್ನು ನಾವು ಉಳಿಸಿಕೊಳ್ಳಬೇಕಾಗಿದೆ. ಆ ಪ್ರೀತಿ ಸ್ನೇಹ ಭಾವೈಕ್ಯತೆಯನ್ನು ನಾವು ಬೆಳೆಸಿ ಈ ದೇಶದ ಅಭ್ಯುದಯಕ್ಕಾಗಿ ಅಭಿವೃದ್ಧಿಗಾಗಿ ಶ್ರಮಿಸಲು ನಾವೆಲ್ಲ ಪ್ರಯತ್ನಿಸಬೇಕಾಗಿದೆ ಎಂದರು. 

ಬಂಟ್ವಾಳ ಪುರಸಭಾ ಸದಸ್ಯೆ ಗಾಯತ್ರಿ ಪ್ರಕಾಶ್, ಉದ್ಯಮಿಗಳಾದ ಲೋಕೇಶ್, ಜನಾರ್ದನ ಪೂಜಾರಿ ಭಾಗವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯ ಶ್ರೀಧರ್ ಸ್ವಾಗತಿಸಿ, ಶಿಕ್ಷಕಿ ಪ್ರಿಯಾ ವಂದಿಸಿದರು. ರೇಣುಕಾ  ಕಾರ್ಯಕ್ರಮ ವಿತರಿಸಿದರು. ಬಳಿಕ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. 

  • Blogger Comments
  • Facebook Comments

0 comments:

Post a Comment

Item Reviewed: ಬೋಳಂಗಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ Rating: 5 Reviewed By: karavali Times
Scroll to Top