ಬಂಟ್ವಾಳ, ಆಗಸ್ಟ್ 29, 2025 (ಕರಾವಳಿ ಟೈಮ್ಸ್) : ರಮಾನಾಥ ರೈ ನೇತೃತ್ವದ ಜಕ್ರಿಬೆಟ್ಟು ಗಣೇಶೋತ್ಸವ ಮುಂದಿನ ದಿನಗಳಲ್ಲಿ ಸ್ವಂತ ಜಮೀನಿನಲ್ಲಿ ನಡೆಯಬೇಕು. ಅಲ್ಲಿ ನಿತ್ಯವೂ ಗಣೇಶನಿಗೆ ದೀಪ ಬೆಳಗಿಸಿ ಸ್ತುತಿ ಮಾಡುವಂತಿರಬೇಕು. ಆ ಮೂಲಕ ರಮಾನಾಥ ರೈ ಅವರ ಹೆಸರು ಶಾಶ್ವತವಾಗಿ ಉಳಿಯಬೇಕು. ಅದಕ್ಕಾಗಿ ನನ್ನ ವೈಯುಕ್ತಿಕ ವತಿಯಿಂದ 10 ಲಕ್ಷ ರೂಪಾಯಿಗಳ ಕೊಡುಗೆಯನ್ನು ನೀಡಲು ಬದ್ದ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ, ಸಹಕಾರಿ ರತ್ನ ಡಾ ಎಂ ಎನ್ ರಾಜೇಂದ್ರ ಕುಮಾರ್ ಭರವಸೆ ನೀಡಿದರು.
ಜಕ್ರಿಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ವತಿಯಿಂದ ಮಾಜಿ ಸಚಿವ ರಮಾನಾಥ ರೈ ಅವರ ಗೌರವಾಧ್ಯಕ್ಷತೆಯಲ್ಲಿ ಬಂಟ್ವಾಳ-ಬೈಪಾಸಿನ ಜಕ್ರಿಬೆಟ್ಟುವಿನಲ್ಲಿ ಆಚರಿಸಲ್ಪಡುವ 22ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮದ ಶುಕ್ರವಾರ ನಡೆದ 3ನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಜಕ್ರಿಬೆಟ್ಟು ಗಣೇಶೋತ್ಸವ ರಮಾನಾಥ ರೈ ಅವರು ಸಮಾಜಕ್ಕೆ ನೀಡುತ್ತಿರುವ ದೊಡ್ಡ ಕೊಡುಗೆಯಾಗಿದೆ. ವಿಶೇಷ ವಿಜ್ರಂಭಣೆಯಿಂದ ನಡೆಯುವ ಜಕ್ರಿಬೆಟ್ಟು ಗಣೇಶೋತ್ಸವಕ್ಕೆ ಕಳೆದ 21 ವರ್ಷವೂ ಭಾಗವಹಿಸಿದ್ದೇನೆ. ಈ ವರ್ಷವೂ ಬಂದಿದ್ದೇನೆ. ಈ ಹಿಂದೆ ಇಲ್ಲಿನ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಬೆಳಿಗ್ಗೆ ಬಂದು ರಾತ್ರಿವರೆಗೂ ಕಳೆದ ದಿನಗಳೂ ಇದೆ ಎಂದು ಸ್ಮರಿಸಿಕೊಂಡರು.
ಶ್ರೀ ಕ್ಷೇತ್ರ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಗಳು ಆಶೀರ್ವಚನಗೈದರು. ಮಾಜಿ ಸಚಿವ, ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಬಿ ರಮಾನಾಥ ರೈ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಜೆ ಆರ್ ಲೋಬೋ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಪದ್ಮರಾಜ್ ಆರ್ ಪೂಜಾರಿ, ಮಿಥುನ್ ರೈ, ಉದ್ಯಮಿಗಳಾದ ಪ್ರವೀಣ್ ಫೆರ್ನಾಂಡಿಸ್ ಉಜಿರೆ, ಸುಧಾಕರ ಆಚಾರ್ಯ ಭಾಗವಹಿಸಿದ್ದರು.
ಗಣೇಶೋತ್ಸವ ಸಮಿತಿ ಅಧ್ಯಕ್ಷ ಬಿ ಪದ್ಮಶೇಖರ್ ಜೈನ್, ರಾಜ್ಯ ಗೇರು ಅಭಿವೃದ್ದಿ ನಿಗಮದ ಅಧ್ಯಕ್ಷೆ ಮಮತಾ ಡಿ ಎಸ್ ಗಟ್ಟಿ, ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಎ ಸಿ ಭಂಡಾರಿ, ಕೆಪಿಸಿಸಿ ಸದಸ್ಯರಾದ ಎಂ ಅಶ್ವನಿ ಕುಮಾರ್ ರೈ, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪ್ರಮುಖರಾದ ಮಾಣಿ ಗ್ರಾ ಪಂ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮಾಣಿ, ಅಕ್ರಮ-ಸಕ್ರಮ ಸಮಿತಿ ಮಾಜಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಬಾಲಕೃಷ್ಣ ಅಂಚನ್, ಚಂದ್ರಶೇಖರ್ ಭಂಡಾರಿ, ಬಂಟ್ವಾಳ ಗ್ಯಾರಂಟಿ ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ, ಬುಡಾ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ಅಕ್ರಮ-ಸಕ್ರಮ ಸಮಿತಿ ಸದಸ್ಯ ಸುರೇಶ್ ಕುಮಾರ್ ಜೋರಾ, ಪುರಸಭಾ ಮಾಜಿ ಸದಸ್ಯ ಪ್ರವೀಣ್ ಬಂಟ್ವಾಳ, ತಾ ಪಂ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಸಂಪತ್ ಕುಮಾರ್ ಶೆಟ್ಟಿ, ಕೆಡಿಪಿ ಸದಸ್ಯರುಗಳಾದ ಹಾಜಿ ಎ ಬಿ ಅಬ್ದುಲ್ಲ, ಮುಹಮ್ಮದ್ ನಂದಾವರ, ಬಂಟ್ವಾಳ ತಾಲೂಕು ಗುತ್ತಿಗೆದಾರರ ಸಂಘದ ಅಧ್ಯಕ್ಷ ಶೈಲೇಶ್ ಪೂಜಾರಿ, ವೆಂಕಪ್ಪ ಪೂಜಾರಿ ಬಂಟ್ವಾಳ ಮೊದಲಾದವರು ಉಪಸ್ಥಿತರಿದ್ದರು.
ಗಣೇಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜೀವ್ ಶೆಟ್ಟಿ ಎಡ್ತೂರು ಸ್ವಾಗತಿಸಿ, ಬುಡಾ ಅಧ್ಯಕ್ಷ ಬೇಬಿ ಕುಂದರ್ ವಂದಿಸಿದರು. ರಾಜೀವ್ ಕಕ್ಕೆಪದವು ಕಾರ್ಯಕ್ರಮ ನಿರೂಪಿಸಿದರು.
0 comments:
Post a Comment