ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ 4 ಲಾರಿಗಳು ಸುಳ್ಯ ಪೊಲೀಸರ ಬಲೆಗೆ - Karavali Times ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ 4 ಲಾರಿಗಳು ಸುಳ್ಯ ಪೊಲೀಸರ ಬಲೆಗೆ - Karavali Times

728x90

24 August 2025

ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ 4 ಲಾರಿಗಳು ಸುಳ್ಯ ಪೊಲೀಸರ ಬಲೆಗೆ

ಸುಳ್ಯ, ಆಗಸ್ಟ್ 24, 2025 (ಕರಾವಳಿ ಟೈಮ್ಸ್) : ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ನಾಲ್ಕು ಲಾರಿಗಳನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಜಾಲ್ಸೂರು ಗ್ರಾಮದ ಅಡ್ಕಾರು ಬಳಿ ಭಾನುವಾರ ಬೆಳಿಗ್ಗೆ ನಡೆದಿದೆ. 

ಭಾನುವಾರ ಬೆಳಿಗ್ಗೆ 4 ಲಾರಿಗಳಲ್ಲಿ ಮುರೂರು ಕಡೆಯಿಂದ ಸುಳ್ಯ ಮಾರ್ಗವಾಗಿ ಮಡಿಕೇರಿ ಕಡೆಗೆ, ಅಕ್ರಮವಾಗಿ ಕೆಂಪುಕಲ್ಲು ಸಾಗಾಟ ಮಾಡುತ್ತಿರುವ ಬಗ್ಗೆ ಸುಳ್ಯ ಪೆÇಲೀಸ್ ಪಿಎಸ್ಸೈ ಅವರಿಗೆ ಮಾಹಿತಿ ಬಂದ ಮೇರೆಗೆ ಸಿಬ್ಬಂದಿಗಳೊಂದಿಗೆ ಜಾಲ್ಸೂರು ಗ್ರಾಮದ ಅಡ್ಕಾರು ಬಳಿ ಸದ್ರಿ ವಾಹನಗಳನ್ನು ತಡೆದು  ಪರಿಶೀಲಿಸಿದಾಗ, 4 ಲಾರಿಗಳಲ್ಲಿ ಯಾವುದೇ ಅನುಮತಿಯಿಲ್ಲದೇ, ಅಕ್ರಮವಾಗಿ ಕೆಂಪುಕಲ್ಲು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

ನಾಲ್ಕೂ ಲಾರಿಗಳನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 45 ಲಕ್ಷ ರೂಪಾಯಿ ಮೌಲ್ಯದ ಲಾರಿಗಳು, 43,750/- ರೂಪಾಯಿ ಮೌಲ್ಯದ 1750 ಕಲ್ಲುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಲಾರಿಗಳ ಚಾಲಕರು ಹಾಗೂ ಮಾಲಕರುಗಳ ವಿರುದ್ಧ ಸುಳ್ಯ   ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ 4 ಲಾರಿಗಳು ಸುಳ್ಯ ಪೊಲೀಸರ ಬಲೆಗೆ Rating: 5 Reviewed By: karavali Times
Scroll to Top