ಮಂಗಳೂರು, ಆಗಸ್ಟ್ 10, 2025 (ಕರಾವಳಿ ಟೈಮ್ಸ್) : ಪುತ್ತೂರು ನಗರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 200/2017 ಕಲಂ 392 ಐಪಿಸಿ, 25 27 ಆರ್ಮ್ಸ್ ಆಕ್ಟ್ ಪ್ರಕರಣದಲ್ಲಿ ಆರೋಪಿತನಾಗಿ, ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಹಲವಾರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆಸಾಮಿ ಕೇರಳ, ತ್ರಿಶೂರ್ ಜಿಲ್ಲೆಯ ನಿವಾಸಿ ಇಲಿಯಾಸ್ ಪಿ ಎ ಎಂಬಾತನನ್ನು ಪೊಲೀಸರು ಕೇರಳದಲ್ಲಿ ದಸ್ತಗಿರಿ ಮಾಡಿದ್ದಾರೆ.
ಪುತ್ತೂರು ಎಎಸ್ಪಿ ಅರುಣ್ ನಾಗೇಗೌಡ ಅವರ ಮಾರ್ಗದರ್ಶನದಲ್ಲಿ, ಉಪ್ಪಿನಂಗಡಿ ಪಿಎಸ್ಸೈ ಕೌಶಿಕ್ ಅವರ ನೇತೃತ್ವದ, ಸಿಬ್ಬಂದಿಗಳಾದ ಪ್ರಶಾಂತ್ ರೈ, ಗಣೇಶ್, ಮ್ಯಾಥ್ಯೂ ವರ್ಗೀಸ್ ಹಾಗೂ ಶ್ರೀಶೈಲ ಎಂ ಕೆ ಅವರನ್ನೊಳಗೊಂಡ ವಿಶೇಷ ತಂಡವು ಈ ಕಾರ್ಯಾಚರಣೆ ನಡೆಸಿದ್ದು, ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಆರೋಪಿಯ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆ, ಉಪ್ಪಿನಂಗಡಿ ಪೊಲೀಸ್ ಠಾಣೆ, ಧರ್ಮಸ್ಥಳ ಪೊಲೀಸ್ ಠಾಣೆಗಳಲ್ಲಿ ಹಾಗೂ ಕೇರಳ ರಾಜ್ಯದ ತ್ರಿಶೂರ್ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ಸುಮಾರು 20 ಪ್ರಕರಣಗಳು ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
0 comments:
Post a Comment