ಬಂಟ್ವಾಳ ಕುಲಾಲ ಸುಧಾರಕ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಸೆ. 15 ಕೊನೆ ದಿನಾಂಕ - Karavali Times ಬಂಟ್ವಾಳ ಕುಲಾಲ ಸುಧಾರಕ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಸೆ. 15 ಕೊನೆ ದಿನಾಂಕ - Karavali Times

728x90

18 August 2025

ಬಂಟ್ವಾಳ ಕುಲಾಲ ಸುಧಾರಕ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಸೆ. 15 ಕೊನೆ ದಿನಾಂಕ

ಬಂಟ್ವಾಳ, ಆಗಸ್ಟ್ 18, 2025 (ಕರಾವಳಿ ಟೈಮ್ಸ್) : ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ವತಿಯಿಂದ 2025ನೇ ಸಾಲಿನ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. 2024-25ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಅತ್ಯಧಿಕ ಅಂಕಗಳನ್ನು ಪಡೆದ ತಾಲೂಕಿನ ಕುಲಾಲ ಸಮಾಜದ ವಿದ್ಯಾರ್ಥಿಗಳಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನಗಳೊಂದಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ. ಜತೆಗೆ ಆರ್ಥಿಕವಾಗಿ ತೀರಾ ಹಿಂದುಳಿದ ತಾಲೂಕಿನ ಕುಲಾಲ ಸಮಾಜದ ಎಸ್ಸೆಸ್ಸೆಲ್ಸಿಯಲ್ಲಿ ಶೇಕಡಾ 80ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ನಿರಂತರ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಎರಡೂ ಸೌಲಭ್ಯಗಳಿಗೆ ವಿದ್ಯಾರ್ಥಿಗಳು ಸ್ವವಿವರದ ಅರ್ಜಿಯೊಂದಿಗೆ ಅಂಕಪಟ್ಟಿಯ ಪ್ರತಿ, ಕಲಿಕಾ ದೃಢಪತ್ರ, ಆಧಾರ್ ಕಾರ್ಡ್ ಪ್ರತಿ, ಪಡಿತರ ಚೀಟಿಯ ಪ್ರತಿ, ಎರಡು ಭಾವಚಿತ್ರಗಳನ್ನು ಮೊಬೈಲ್ ಸಂಖ್ಯೆಯೊಂದಿಗೆ ನಮೂದಿಸಿ ಸೆಪ್ಟೆಂಬರ್ 15ರೊಳಗೆ ಅಧ್ಯಕ್ಷರು/ ಕಾರ್ಯದರ್ಶಿ, ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ರಿ, ಪೆÇಸಳ್ಳಿ, ಬಿ ಸಿ ರೋಡು, ಜೋಡುಮಾರ್ಗ ಅಂಚೆ, ಬಂಟ್ವಾಳ ತಾಲೂಕು-574 219 ಇವರಿಗೆ ತಲುಪಿಸುವಂತೆ ಸಂಘದ ಪ್ರಕಟಣೆ ತಿಳಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ ಕುಲಾಲ ಸುಧಾರಕ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಸೆ. 15 ಕೊನೆ ದಿನಾಂಕ Rating: 5 Reviewed By: karavali Times
Scroll to Top