ಮಂಗಳೂರು, ಆಗಸ್ಟ್ 28, 2025 (ಕರಾವಳಿ ಟೈಮ್ಸ್) : ದೇಶದಾದ್ಯಂತ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ವ್ಯಾಪ್ತಿಯನ್ನು ವಿಸ್ತರಿಸಲು ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯವು ಇ-ಶ್ರಮ್ ಪೆÇೀರ್ಟಲ್ ಅಭಿವೃದ್ಧಿಪಡಿಸಿದ್ದು, ಇದರಲ್ಲಿ ಸ್ವಿಗ್ಗಿ, ಝೊಮಾಟೋಗಳಂತಹ ಸಂಸ್ಥೆಗಳಲ್ಲಿ ಪುಢ್ ಡೆಲಿವರಿ ಮಾಡುವ ಹಾಗೂ ಅಮೆಜಾನ್, ಫ್ಲಿಪ್‍ಕಾರ್ಟ್, ಪೆÇೀರ್ಟರ್, ಫಾರ್ಮಸಿ, ಬ್ಲಿಂಕಿಟ್, ಜೆಪೆÇ್ಟೀ, ಬಿಗ್ ಬಾಸ್ಕೆಟ್, ಡಾಮಿನೋಸ್ ಮುಂತಾದ ಸಂಸ್ಥೆಗಳಲ್ಲಿ ಡೆಲಿವರಿ ಕೆಲಸ ನಿರ್ವಹಿಸುವ ಪ್ಲಾಟ್ ಫಾರ್ಮ್ ಕಾರ್ಮಿಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಲು ಸೆಪ್ಟೆಂಬರ್ 5 ರವರೆಗೆ ವಿಶೇಷ ಅಭಿಯಾನವನ್ನು ನಡೆಸಲಾಗುತ್ತಿದೆ.
ಇದರಲ್ಲಿ 16 ರಿಂದ 59 ವರ್ಷದೊಳಗಿನ ಇ.ಎಸ್.ಐ ಮತ್ತು ಪಿ.ಎಫ್ ಸೌಲಭ್ಯ ಹೊಂದಿರದ, ಆದಾಯ ತೆರಿಗೆದಾರರಲ್ಲದ ಡೆಲಿವರಿ ಪ್ಲಾಟ್ ಫಾರ್ಮ್ ಕಾರ್ಮಿಕರು ಯೆಯ್ಯಾಡಿ ಶರ್ಬತ್ ಕಟ್ಟೆಯಲ್ಲಿರುವ ಕಾರ್ಮಿಕ ಭವನ ಕಛೇರಿಯಲ್ಲಿ ಅಥವಾ ವೆಬ್‍ಸೈಟ್ www.eshram.gov.in ಮೂಲಕ ನೋಂದಾಯಿಸಿಕೊಂಡು ಯೋಜನೆಯ ಸೌಲಭ್ಯ ಪಡೆಯುವಂತೆ ಉಪವಿಭಾಗ-1 ಮತ್ತು 2ರ ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ.
0 comments:
Post a Comment