ಮಂಗಳೂರು, ಆಗಸ್ಟ್ 22, 2025 (ಕರಾವಳಿ ಟೈಮ್ಸ್) : ನಗರದ ಮಣ್ಣಗುಡ್ಡದಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕ್ರೀಡಾ ಬಾಲಕ ಮತ್ತು ಬಾಲಿಯರ ವಸತಿ ಗೃಹಕ್ಕೆ ಮಂಗಳೂರು ಲೋಕಾಯುಕ್ತ ಪೊಲೀಸರು ಶುಕ್ರವಾರ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ಡಾ ಗಾನ ಪಿ ಕುಮಾರ್ ಹಾಗೂ ಇನ್ಸ್ ಪೆಕ್ಟರ್ ಗಳಾದ ಶ್ರೀಮತಿ ಭಾರತಿ ಜಿ, ರವಿ ಪವಾರ್ ಅವರು ಸಿಬ್ಬಂದಿಗಳೊಂದಿಗೆ ಈ ದಾಳಿ ನಡೆಸಿದ್ದು, ವಸತಿ ಗೃಹ ಪರಿಶೀಲನೆ ವೇಳೆ ಸಾಕಷ್ಟು ಲೋಪ ದೋಷಗಳು ಕಂಡುಬಂದಿದೆ. ವಸತಿ ಗೃಹದ ಅಡುಗೆ ಕೋಣೆಯಲ್ಲಿ ಶುಚಿತ್ವ ಇರುವುದಿಲ್ಲ, ದವಸ ಧಾನ್ಯಗಳ ಸ್ಟಾಕ್ ಇರುವುದಿಲ್ಲ, ಅಕ್ಕಿಯಲ್ಲಿ ಹುಳುಗಳು ಇರುವುದು ಕಂಡುಬಂದಿದೆ. ಸ್ಟಾಕ್ ರಿಜಿಸ್ಟರ್ ಇರುವುದಿಲ್ಲ. ಅಡುಗೆಗೆ ಕಡಿಮೆ ಗುಣ ಮಟ್ಟದ ಹೆಚ್ಚು ಪ್ಯಾಟ್ ಇರುವ ಪಾಮೋಲಿನ್ ಅಡುಗೆ ಎಣ್ಣೆಯನ್ನು ಬಳಸುವುದು ಕಂಡು ಬಂದಿದೆ.
ವಸತಿ ಗೃಹದಲ್ಲಿ 33 ಮಕ್ಕಳಿದ್ದರು. ಅವರಿಗೆ ಪೌಷ್ಟಿಕಯುಕ್ತ ಆಹಾರ ನೀಡಿರುವುದಿಲ್ಲ. ಊಟದ ಹಾಲ್ ನಲ್ಲಿ ಹೆಚ್ಚಿನ ಸ್ಥಳವಕಾಶ ಇಲ್ಲದಿದ್ದರೂ ಕೂಡ ಎರಡು ವಸತಿ ಗೃಹದಲ್ಲಿನ ಬಾಲಕರಿಗೆ ಮತ್ತು ಬಾಲಕಿಯರಿಗೆ ಒಂದೇ ಕಡೆಯಲ್ಲಿ ಊಟದ ವ್ಯವಸ್ಥೆ ಕಲ್ಪಿಸುವುದು ಕಂಡುಬಂದಿದೆ. ಸ್ಕಾಲರ್ಶಿಪ್ ಪಡೆದು ವಿದ್ಯಾಭ್ಯಾಸ ಮಾಡುವ ಹೆಚ್ಚಿನ ಮಕ್ಕಳು ಅಥ್ಲೆಟಿಕ್ಸ್ ಗಳಾಗಿದ್ದು, ಸರಕಾರದಿಂದ ಅನುದಾನ ಬರುತಿದ್ದರು ಕೂಡ ಸರಿಯಾದ ಆಹಾರದ ವ್ಯವಸ್ಥೆ ಮಾಡಿರುವುದಿಲ್ಲ.
ಸರಕಾರದಿಂದ ಪ್ರತಿ ವರ್ಷ ಸ್ಪೋರ್ಟ್ಸ್ ಮಕ್ಕಳಿಗೆ ಕ್ರೀಡಾ ಸಾಮಗ್ರಿಗಳನ್ನು ವಿತರಿಸಲು ಅನುದಾನ ನೀಡಲಾಗುತ್ತಿದ್ದರೂ ಅರ್ಧ ವರ್ಷ ಮಕ್ಕಳ ಪೆÇೀಷಕರೇ ತಮ್ಮ ಖರ್ಚಿನಲ್ಲಿ ಕ್ರೀಡಾ ಸಾಮಗ್ರಿಗಳನ್ನು ಮಕ್ಕಳಿಗೆ ಖರೀದಿಸಿ ಕೊಡಬೇಕಾಗುತ್ತದೆ. ಸರಕಾರದಿಂದ ಅನುದಾನ ಬರುತ್ತಿದ್ದರು ಕೂಡ ವಿತರಿಸಿರುವ ಶೂ, ಕಂಪೆನಿಯ ಶೂ ಆಗಿದ್ದರು ಕೂಡ ಕಳಪೆ ಗುಣಮಟ್ಟದಾಗಿದ್ದು ಕೆಲವೇ ವಾರದಲ್ಲಿ ಹಾಳಾಗಿರುತ್ತದೆ ಎಂದು ತಿಳಿದುಬಂದಿದೆ. ಕ್ರೀಡಾ ವಸತಿ ನಿಲಯದಲ್ಲಿ ಹೆಚ್ಚಿನ ಕೊಠಡಿಗಳು ಇದ್ದರೂ ಕೂಡ ಒಂದು ಕೊಠಡಿಯಲ್ಲಿ ಐದು ಮಕ್ಕಳಿಗೆ ವಸತಿ ವ್ಯವಸ್ಥೆ ಕಲ್ಪಿಸಿರುವುದು ಕಂಡು ಬಂದಿದೆ. ಮಕ್ಕಳನ್ನು ವಿವಿಧ ಕ್ರೀಡೆಗಳಿಗೆ ಕರೆದುಕೊಂಡು ಹೋಗಲು ಸರಕಾರದಿಂದ ಅನುದಾನ ಬರುತ್ತಿದ್ದರೂ ಕೂಡ ಮಕ್ಕಳ ಪೆÇೀಷಕರೇ ಖರ್ಚನ್ನು ಭರಿಸಬೇಕಾಗುತ್ತದೆ. ಸರಕಾರದಿಂದ ಬರುವ ಅನುದಾನ ದುರುಪಯೋಗವಾಗುವುದನ್ನು ಲೋಕಾಯುಕ್ತ ಅಧಿಕಾರಿಗಳು ಕಂಡುಕೊಂಡಿದ್ದಾರೆ.
ಕ್ರೀಡಾ ವಸತಿ ಗೃಹದ ಮಕ್ಕಳು ತಮ್ಮ ಪೆÇೀಷಕರನ್ನು ಸಂಪರ್ಕಿಸಲು ದೂರವಾಣಿಯ ವ್ಯವಸ್ಥೆ ಇರುವುದಿಲ್ಲ. ಕ್ರೀಡಾ ವಿದ್ಯಾರ್ಥಿಗಳು ಕ್ರೀಡೆಯ ಸಂದರ್ಭದಲ್ಲಿ ಬೇರೆ ಬೇರೆ ಕಡೆಗೆ ತೆರಳಿದಾಗ ತರಗತಿಯ ಪಾಠ ಪ್ರವಚನಕ್ಕೆ ತೊಂದರೆಯಾಗುತ್ತಿದ್ದು, ಕಂಪ್ಯೂಟರ್ ಮೂಲಕ ಅಧ್ಯಯನಕ್ಕೆ ಸಂಬಂಧಿಸಿದ ವಿಷಯವನ್ನು ಪಡೆದುಕೊಳ್ಳಲು ಕಂಪ್ಯೂಟರನ್ನು ಒದಗಿಸಿರುವುದಿಲ್ಲ ಎಂಬುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಕಂಪ್ಯೂಟರ್ ಗಳು ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಒದಗಿಸದೆ ಹಾಳಾಗಿದ್ದು, ಮಕ್ಕಳಿಗೆ ಕೌನ್ಸಿಲಿಂಗ್ ಮತ್ತು ಹೆಲ್ತ್ ಚೆಕ್ ಅಪ್ ಮಾಡಿರುವುದು ದಾಖಲಾತಿಯಿಂದ ಕಂಡುಬಂದಿರುವುದಿಲ್ಲ.
ಈ ಬಗ್ಗೆ ಮಂಗಳ ಸ್ಟೇಡಿಯಂನಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಮತ್ತು ಉಪನಿರ್ದೇಶಕರ ಕಚೇರಿಯ ಸಮೀಪ ಅಂದರೆ 100 ಮೀಟರ್ ದೂರದಲ್ಲಿ ಬಾಲಕ ಬಾಲಕಿಯರ ಕ್ರೀಡಾ ವಸತಿ ಗೃಹ ಇದ್ದರೂ ಕೂಡ ಕ್ರೀಡಾ ವಸತಿ ನಿಲಯಕ್ಕೆ ಇಲಾಖೆಯ ಸಹಾಯಕ ನಿರ್ದೇಶಕರು, ಉಪನಿರ್ದೇಶಕರು ಭೇಟಿಕೊಟ್ಟು ಪರಿಶೀಲನೆ ಮಾಡಿರುವುದು ಕಂಡುಬಂದಿರುವುದಿಲ್ಲ. ಸದ್ರಿ ಅಧಿಕಾರಿಗಳು ವಸತಿ ಗೃಹದಲ್ಲಿ ಆಹಾರದ ಕೊರತೆ, ಆಹಾರದ ಸರಬರಾಜಿನಲ್ಲಿ ಅವ್ಯವಹಾರ, ಟೆಂಡರ್ ಬದಲಾವಣೆ ಮಾಡದಿರುವುದು, ಸ್ಟಾಕ್ ಪರಿಶೀಲಿಸದಿರುವುದನ್ನು ಲೋಕಾ ಅಧಿಕಾರಿಗಳು ಸ್ಪಷ್ಟಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಸಮಗ್ರ ವರದಿಯನ್ನು ಲೋಕಾಯುಕ್ತರಿಗೆ ನೀಡಲಾಗುವುದು ಎಂದು ಲೋಕಾಯುಕ್ತ ಎಸ್ಪಿ ಕುಮಾರಚಂದ್ರ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
0 comments:
Post a Comment