ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳು ಮಹಿಳೆಯರನ್ನು ಸ್ವಾವಲಂಬಿ, ಸ್ವಾಭಿಮಾನಿಗಳನ್ನಾಗಿ ಮಾಡಿದೆ, ಮುಂದೆಯೂ ರಾಜ್ಯದಲ್ಲಿ ಜನ “ಕೈ” ಹಿಡೀತಾರೆ : ಸೌಮ್ಯಾ ರೆಡ್ಡಿ - Karavali Times ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳು ಮಹಿಳೆಯರನ್ನು ಸ್ವಾವಲಂಬಿ, ಸ್ವಾಭಿಮಾನಿಗಳನ್ನಾಗಿ ಮಾಡಿದೆ, ಮುಂದೆಯೂ ರಾಜ್ಯದಲ್ಲಿ ಜನ “ಕೈ” ಹಿಡೀತಾರೆ : ಸೌಮ್ಯಾ ರೆಡ್ಡಿ - Karavali Times

728x90

19 August 2025

ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳು ಮಹಿಳೆಯರನ್ನು ಸ್ವಾವಲಂಬಿ, ಸ್ವಾಭಿಮಾನಿಗಳನ್ನಾಗಿ ಮಾಡಿದೆ, ಮುಂದೆಯೂ ರಾಜ್ಯದಲ್ಲಿ ಜನ “ಕೈ” ಹಿಡೀತಾರೆ : ಸೌಮ್ಯಾ ರೆಡ್ಡಿ

ಬಂಟ್ವಾಳದಲ್ಲಿ ಮಹಿಳಾ ಕಾಂಗ್ರೆಸ್ ಸಮಾವೇಶ  


ಬಂಟ್ವಾಳ, ಆಗಸ್ಟ್ 19, 2025 (ಕರಾವಳಿ ಟೈಮ್ಸ್) : ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಕಾಂಗ್ರೆಸ್ ಸರಕಾರ ಮಹಿಳೆಯರನ್ನು ಸ್ವಾವಲಂಬಿ, ಸ್ವಾಭಿಮಾನಿಗಳನ್ನಾಗಿ ಮಾಡಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಸೌಮ್ಯಾ ರೆಡ್ಡಿ ಹೇಳಿದರು. 
ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಗಳ ಜಂಟಿ ಆಶ್ರಯದಲ್ಲಿ ಮಾಜಿ ಸಚಿವ ಬಿ ರಮಾನಾಥ ರೈ ಅವರ ನೇತೃತ್ವದಲ್ಲಿ ಬಿ ಸಿ ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಆಗಸ್ಟ್ 19 ರಂದು ನಡೆದ ಮಹಿಳಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರು ಕನಿಷ್ಠ ವರ್ಷಕ್ಕೊಮ್ಮೆಯಾದರೂ ತಮ್ಮ ಅರೋಗ್ಯ ಪರೀಕ್ಷಿಸಿಕೊಂಡು ಆರೋಗ್ಯದ ಕಡೆ ಹೆಚ್ಚಿನ ಗಮನ ಕೊಡಿ, ಆರೋಗ್ಯವಂತರಾಗಿ ಸ್ವಾಭಿಮಾನಿಗಳಾಗಿ ಬದುಕಲು ಗರಿಷ್ಠ ಪ್ರಯತ್ನ ನಡೆಸಿ ಎಂದು ಕರೆ ನೀಡಿದರು. 
ಕಾಂಗ್ರೆಸ್ ಪಕ್ಷದ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಮೊದಲಾದ ನಾಯಕರು ಮಹಿಳೆಯರ ಮೇಲೆ ವಿಶೇಷ ಕಾಳಜಿ ಇಟ್ಟುಕೊಂಡು ರಾಜ್ಯದಲ್ಲಿ ಚುನಾವಣೆ ಸಂದರ್ಭ ನೀಡಿದ ಎಲ್ಲ ಮಹಿಳಾ ಕೇಂದ್ರಿತ ಭರವಸೆಗಳನ್ನು ಕನಿಷ್ಠ ಅವಧಿಯಲ್ಲಿ ಜಾರಿಗೊಳಿಸಿ ಮಹಿಳೆಯರ ಕೈ ಬಲಪಡಿಸಿದ್ದಾರೆ. ಮಹಿಳಾ ಸಬಲೀಕರಣ ಹಾಗೂ ಅಭಿವೃದ್ದಿ ಪರ ಚಟುವಟಿಕೆಗಳ ಕಾರಣಗಳಿಂದಾಗಿ ಮುಂದಿನ ಸ್ಥಳೀಯಾಡಳಿತ ಚುನಾವಣೆಗಳಲ್ಲಿ ಜನ ಮತ್ತೆ ಕಾಂಗ್ರೆಸ್ ಕೈ ಹಿಡೀತಾರೆ ಎಂಬ ವಿಶ್ವಾಸ ಖಂಡಿತಾ ಇದೆ ಎಂದ ಸೌಮ್ಯಾ ರೆಡ್ಡಿ ಮಹಿಳೆಯರಿಗೆ ಎಲ್ಲ ರೀತಿಯ ಗೌರವ ಸ್ಥಾನಮಾನಗಳನ್ನು ನೀಡಿದ ಓರ್ವ ಮುತ್ಸದ್ದಿ ನಾಯಕ ರಮಾನಾಥ ರೈ ಅವರಾಗಿದ್ದಾರೆ. ಬಂಟ್ವಾಳದಲ್ಲಿ ಗ್ಯಾರಂಟಿ ಸಮಿತಿಯ ಅಧ್ಯಕ್ಷರಾಗಿಯೂ ಮಹಿಳೆಯನ್ನೇ ಆಯ್ಕೆ ಮಾಡಿಕೊಂಡ ರೈ ಅವರ ಮಹಿಳಾ ಪರ ಮನಸ್ಥಿತಿ ಅರ್ಥಮಾಡಿಕೊಳ್ಳಬಹುದು ಎಂದು ಕೊಂಡಾಡಿದರು. 
ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ ರಮಾನಾಥ ರೈ ಅಧ್ಯಕ್ಷತೆ ವಹಿಸಿದರು. ಜಿಲ್ಲಾ ಗ್ರಾಮೀಣ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಉಷಾ ಅಂಚನ್, ಜಿಲ್ಲಾ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಕುಮಾರಿ ಅಪ್ಪಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಶ್ರೀಮತಿ ಶಾಲೆಟ್ ಪಿಂಟೊ, ಕರ್ನಾಟಕ ಗೇರು ಅಭಿವೃದ್ದಿ ನಿಗಮದ ಅಧ್ಯಕ್ಷೆ ಮಮತಾ ಡಿ ಎಸ್ ಗಟ್ಟಿ, ಬಂಟ್ವಾಳ ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನಾ ಸಮಿತಿ ಅಧ್ಯಕ್ಷೆ ಜಯಂತಿ ವಿ ಪೂಜಾರಿ, ಕೆಪಿಸಿಸಿ ಸದಸ್ಯರುಗಳಾದ ಪಿಯೂಸ್ ಎಲ್ ರೊಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಅಶ್ವನಿ ಕುಮಾರ್ ರೈ, ಬಂಟ್ವಾಳ ಪುರಸಭಾಧ್ಯಕ್ಷ ಬಿ ವಾಸು ಪೂಜಾರಿ ಲೊರೆಟ್ಟೊ, ಬುಡಾ ಅಧ್ಯಕ್ಷ ಬೇಬಿ ಕುಂದರ್, ದ ಕ ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ, ಜಿ ಪಂ ಮಾಜಿ ಸದಸ್ಯ ಬಿ ಪದ್ಮಶೇಖರ ಜೈನ್, ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಬಂಟ್ವಾಳ ಎಪಿಎಂಸಿ ಮಾಜಿ ಅಧ್ಯಕ್ಷ ಕೆ ಪದ್ಮನಾಭ ರೈ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಭಂಡಾರಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಅಂಚನ್, ಬುಡಾ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ಪುರಸಭಾ ಮಾಜಿ ಉಪಾಧ್ಯಕ್ಷೆ ಜೆಸಿಂತಾ ಡಿಸೋಜ, ಸಜಿಪಮುನ್ನೂರು ವಲಯ ಕಾಂಗ್ರೆಸ್ ಅಧ್ಯಕ್ಷ ಯೂಸುಫ್ ಕರಂದಾಡಿ, ಪ್ರಮುಖರಾದ ಶ್ರೀಮತಿ ನಮಿತಾ ಡಿ ರಾವ್, ನಾರಾಯಣ ನಾಯ್ಕ್, ಉಮ್ಮರ್ ಮಂಚಿ ಮೊದಲಾದವರು ಭಾಗವಹಿಸಿದ್ದರು.
ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲವೀನಾ ವಿಲ್ಮಾ ಮೊರಾಸ್ ಸ್ವಾಗತಿಸಿ, ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಐಡಾ ಸುರೇಶ್ ವಂದಿಸಿದರು. ಜಿಲ್ಲಾ ಜವಾಹರ್ ಬಾಲ್ ಮಂಚ್ ಅಧ್ಯಕ್ಷೆ ಶೈಲಜಾ ರಾಜೇಶ್ ಕಾರ್ಯಕ್ರಮ ನಿರೂಪಿಸಿದರು. 
  • Blogger Comments
  • Facebook Comments

0 comments:

Post a Comment

Item Reviewed: ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳು ಮಹಿಳೆಯರನ್ನು ಸ್ವಾವಲಂಬಿ, ಸ್ವಾಭಿಮಾನಿಗಳನ್ನಾಗಿ ಮಾಡಿದೆ, ಮುಂದೆಯೂ ರಾಜ್ಯದಲ್ಲಿ ಜನ “ಕೈ” ಹಿಡೀತಾರೆ : ಸೌಮ್ಯಾ ರೆಡ್ಡಿ Rating: 5 Reviewed By: karavali Times
Scroll to Top