ಪ್ರತ್ಯೇಕ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳ ದಸ್ತಗಿರಿ - Karavali Times ಪ್ರತ್ಯೇಕ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳ ದಸ್ತಗಿರಿ - Karavali Times

728x90

13 August 2025

ಪ್ರತ್ಯೇಕ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳ ದಸ್ತಗಿರಿ

 ಮಂಗಳೂರು, ಆಗಸ್ಟ್ 13, 2025 (ಕರಾವಳಿ ಟೈಮ್ಸ್) :  ಪುತ್ತೂರು ನಗರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 69/2023 ಕಲಂ379 ಐಪಿಸಿ ಪ್ರಕರಣದಲ್ಲಿ 9 ಬಾರಿ ವಾರಂಟ್ ಜಾರಿಯಾಗಿದ್ದರೂ, ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಾವೇರಿ, ಸವಣೂರು ನಿವಾಸಿ ಶಿವಕುಮಾರ್ ಅಲಿಯಾಸ್ ಶಿವು  ಎಂಬಾತನನ್ನು, ಪುತ್ತೂರು ಉಪವಿಭಾಗದ ಡಿವೈಎಸ್ಪಿ ಅರುಣ್ ನಾಗೇಗೌಡ ಹಾಗೂ ಪುತ್ತೂರು ನಗರ ಠಾಣಾ ಸಿಐ ಕಿರಣ್ ಜಾನ್ಸನ್ ಡಿಸೋಜಾ ಅವರ ಮಾರ್ಗದರ್ಶನದಲ್ಲಿ, ಉಪ್ಪಿನಂಗಡಿ ಠಾಣಾ ಪಿಎಸ್ಸೈ ಕೌಶಿಕ್ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಪ್ರಶಾಂತ ರೈ, ಗಣೇಶ ಎನ್, ಶ್ರೀಶೈಲ ಎಂ ಕೆ, ಮಹಮ್ಮದ್ ಮೌಲಾನಾ ಅವರನ್ನೊಳಗೊಂಡ ವಿಶೇಷ ಪೊಲೀಸ್ ತಂಡ ಮಂಗಳವಾರ (ಆಗಸ್ಟ್ 12) ಬೆಂಗಳೂರಿನ ಅಬ್ಜಿಗೆರೆ ಎಂಬಲ್ಲಿ ದಸ್ತಗಿರಿ ಮಾಡುವಲ್ಲಿ ಸಫಲರಾಗಿದ್ದಾರೆ. 

ಉಪ್ಪಿನಂಗಡಿ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 14/2022 ಕಲಂ 394 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿ, ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ಕಳೆದ 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೆಂಗಳೂರು, ಜಗಜೀವನ್ ರಾಮ್ ನಗರ ನಿವಾಸಿ ಸಯ್ಯದ್ ಕಲೀಂ ಅಲಿಯಾಸ್ ಕಲ್ಲು ಮಾಮು ಎಂಬಾತನನ್ನು ಪುತ್ತೂರು ಡಿವೈಎಸ್ಪಿ ಅರುಣ್ ನಾಗೇಗೌಡ ಅವರ ಮಾರ್ಗದರ್ಶನದಲ್ಲಿ, ಉಪ್ಪಿನಂಗಡಿ ಸಿಐ ರವಿ ಬಿ ಎಸ್ ಹಾಗೂ ಪಿಎಸ್ಸೈ ಕೌಶಿಕ್ ಅವರ ನೇತೃತ್ವದಲ್ಲಿ ಉಪ್ಪಿನಂಗಡಿ ಠಾಣಾ ಸಿಬ್ಬಂದಿ ಶಿವರಾಮ ರೈ, ವಿಶೇಷ ತಂಡದ ಸಿಬ್ಬಂದಿಗಳಾದ ಶಾಂತಕುಮಾರ್, ರವಿಕುಮಾರ್, ರಮೇಶ್ ಅವರುಗಳನ್ನೊಳಗೊಂಡ ತಂಡ ದಸ್ತಗಿರಿ ಮಾಡಿದ್ದಾರೆ. ಆರೋಪಿಯ ವಿರುದ್ದ ಬೆಂಗಳೂರು ನಗರದ ವಿವಿಧ ಠಾಣೆಗಳಲ್ಲಿ 4 ಪ್ರಕರಣಗಳು ದಾಖಲಾಗಿದೆ. 

ಕಡಬ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 91/2019 ಕಲಂ 341, 323, 324, 504, 506 ಆರ್/ಡಬ್ಲ್ಯು 34 ಐಪಿಸಿ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ, ಕಳೆದ 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಡಬ ರಾಮಕುಂಜ ನಿವಾಸಿ ಯೂಸೂಫ್ (32) ಎಂಬಾತನನ್ನು, ಕಡಬ ಠಾಣಾ ಪೊಲೀಸರು ಮಂಗಳವಾರ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆತನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಪ್ರತ್ಯೇಕ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳ ದಸ್ತಗಿರಿ Rating: 5 Reviewed By: karavali Times
Scroll to Top