ಮಂಗಳೂರು, ಆಗಸ್ಟ್ 28, 2025 (ಕರಾವಳಿ ಟೈಮ್ಸ್) : ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ, ಕೆ.ಎ.ಎಸ್. ಗೆಜೆಟೆಡ್ ಪೆÇ್ರಬೇಷನರ್, ಗ್ರೂಪ್-ಸಿ, ಆರ್.ಆರ್.ಬಿ ಹಾಗೂ ಎಸ್.ಎಸ್.ಸಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 6ರವರೆಗೆ ಅವಧಿ ವಿಸ್ತರಿಸಲಾಗಿದೆ.
ಅಭ್ಯರ್ಥಿಗಳು ಸೇವಾ ಸಿಂಧು ವೆಬ್ ಸೈಟ್ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತ ಇಲಾಖಾ ವೆಬ್‍ಸೈಟ್ ಅಥವಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.































0 comments:
Post a Comment