ಬಂಟ್ವಾಳ, ಆಗಸ್ಟ್ 27, 2025 (ಕರಾವಳಿ ಟೈಮ್ಸ್) : ಹೆದ್ದಾರಿ ದಾಟುತ್ತಿದ್ದ ಮಹಿಳೆಯೋರ್ವರಿಗೆ ಖಾಸಗಿ ಬಸ್ಸು ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಪೂಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸೋಣಂದೂರು ಗ್ರಾಮದ ಪಣಕಜೆ ಎಂಬಲ್ಲಿ ಆಗಸ್ಟ್ 26 ರಂದು ಸಂಭವಿಸಿದೆ.
ಮೃತ ಪಾದಚಾರಿ ಮಹಿಳೆಯನ್ನು ಸುನಂದಲತಾ (55) ಎಂದು ಹೆಸರಿಸಲಾಗಿದೆ. ಇವರು ಪಣಕಜೆ ಎಂಬಲ್ಲಿ ಬಳ್ಳಮಂಜಕ್ಕೆ ಹೋಗುವ ರಸ್ತೆ ಬಳಿಯಿಂದ ಹೆದ್ದಾರಿಗೆ ಬಂದು ಹೆದ್ದಾರಿ ದಾಟುತ್ತಿದ್ದ ವೇಳೆ ಬೆಳ್ತಂಗಡಿ ಕಡೆಯಿಂದ ಬರುತ್ತಿದ್ದ ಮುಹಮ್ಮದ್ ಶರೀಫ್ ಎಂಬವರು ಚಲಾಯಿಸಿಕೊಂಡು ಬಂದ ತುಳುನಾಡು ಎಂಬ ಹೆಸರಿನ ಖಾಸಗಿ ಬಸ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದ ತೀವ್ರತೆಗೆ ರಸ್ತೆಗೆ ಬಿದ್ದ ಸುನಂದ ಅವರ ತಲೆಗೆ ಗಂಭೀರ ಏಟಾಗಿದ್ದು, ತಕ್ಷಣ ಅವರನ್ನು ಅಂಬ್ಯುಲೆನ್ಸ್ ಮೂಲಕ ಬೆಳ್ತಂಗಡಿ ಅಭಯ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ. ಈ ಬಗ್ಗೆ ಮಾಲಾಡಿ ಗ್ರಾಮದ ಪೊಮ್ಮಾಜೆ ನಿವಾಸಿ ಇಸ್ಮಾಯಿಲ್ ಎಂಬವರು ನೀಡಿದ ದೂರಿನಂತೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.































0 comments:
Post a Comment