ತಿಮರೋಡಿ ದಸ್ತಗಿರಿ ಮಾಡಲು ಬಂದಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪದಲ್ಲಿ ಗಿರೀಶ್ ಮಟ್ಟಣ್ಣವರ್, ಜಯಂತ್ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಎಫ್.ಐ.ಆರ್. ದಾಖಲು - Karavali Times ತಿಮರೋಡಿ ದಸ್ತಗಿರಿ ಮಾಡಲು ಬಂದಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪದಲ್ಲಿ ಗಿರೀಶ್ ಮಟ್ಟಣ್ಣವರ್, ಜಯಂತ್ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಎಫ್.ಐ.ಆರ್. ದಾಖಲು - Karavali Times

728x90

22 August 2025

ತಿಮರೋಡಿ ದಸ್ತಗಿರಿ ಮಾಡಲು ಬಂದಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪದಲ್ಲಿ ಗಿರೀಶ್ ಮಟ್ಟಣ್ಣವರ್, ಜಯಂತ್ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಎಫ್.ಐ.ಆರ್. ದಾಖಲು

 ಮಂಗಳೂರು, ಆಗಸ್ಟ್ 22, 2025 (ಕರಾವಳಿ ಟೈಮ್ಸ್) : ಮಹೇಶ್ ಶೆಟ್ಟಿ ತಿಮರೋಡಿ ವಿರುದ್ದ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿ ಅವರ ಮನೆಯಾದ ಉಜಿರೆ ಗ್ರಾಮದ ತಿಮರೋಡಿಗೆ ತೆರಳಿದಾಗ ಮನೆಯಲ್ಲಿದ್ದ ಗಿರೀಶ್ ಮಟ್ಟಣ್ಣವರ್, ಜಯಂತ್ ಎಂಬವರು ಹಾಗೂ ಇತರ 7 ರಿಂದ 10 ಮಂದಿ ಅಕ್ರಮ ಕೂಟ ಸೇರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನಲೆಯಲ್ಲಿ ಅವರ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಬ್ರಹ್ಮಾವರ ಪೆÇಲೀಸ್ ಠಾಣಾ ಅಪರಾಧ ಕ್ರಮಾಂಕ 177/2025, ಕಲಂ 196(1) (ಎ) ಬಿಎನ್‍ಎಸ್ ಪ್ರಕರಣದ ತನಿಖಾಧಿಕಾರಿಯಾಗಿರುವ, ಸದ್ರಿ ಠಾಣಾ ಪೊಲೀಸ್ ಉಪ-ನಿರೀಕ್ಷಕರು (ಕಾನೂನು ಮತ್ತು ಸುವ್ಯವಸ್ಥೆ) ಪ್ರಕರಣದಲ್ಲಿ ಅಪಾದಿತನಾದ ಮಹೇಶ್ ಶೆಟ್ಟಿ ತಿಮರೋಡಿ ಎಂಬಾತನು ಪ್ರಕರಣದ ತನಿಖೆಗೆ ಸಹಕರಿಸದ ಹಿನ್ನೆಲೆಯಲ್ಲಿ, ಮೇಲಾಧಿಕಾರಿಯವರ ಸೂಚನೆಯ ಮೇರೆಗೆ ಅಪಾದಿನನ್ನು ದಸ್ತಗಿರಿ ಮಾಡುವುದಕ್ಕಾಗಿ, ಇಲಾಖಾ ಮೇಲಾಧಿಕಾರಿಯವರೊಂದಿಗೆ ಹಾಗೂ ಸಿಬ್ಬಂದಿಗಳೊಂದಿಗೆ ಗುರುವರ ಬೆಳಿಗ್ಗೆ, ಅಪಾದಿತನ ಮನೆಯಾದ ಬೆಳ್ತಂಗಡಿ, ಉಜಿರೆ ಗ್ರಾಮದ ತಿಮರೋಡಿ ಹೌಸ್ ಎಂಬಲ್ಲಿಗೆ ತೆರಳಿದಾಗ, ಆಪಾದಿತನ ಮನೆಯಲ್ಲಿದ್ದ ಗಿರೀಶ್ ಮಟ್ಟಣ್ಣವರ್, ಜಯಂತ್ ಎಂಬವರುಗಳು ಹಾಗೂ ಇತರ 7 ರಿಂದ 10 ಜನರು ಆಪಾದಿತನನ್ನು ದಸ್ತಗಿರಿ ಮಾಡಲು ತಡೆಯೊಡ್ಡಿ, ಸ್ಥಳಕ್ಕೆ ಹೆಚ್ಚಿನ ಜನರನ್ನು ಅಕ್ರಮ ಕೂಟವಾಗಿ ಸೇರಿಸಿ, ಇಲಾಖಾ ಕರ್ತವ್ಯ ನಿರ್ವಹಿಸದಂತೆ ಬಲಪ್ರಯೋಗ ನಡೆಸಿ ಅಡ್ಡಿಪಡಿಸಿರುತ್ತಾರೆ. 

ಮುಂದುವರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಮಾನಹಾನಿಕಾರವಾಗಿ ಸಂದೇಶಗಳನ್ನು ಪ್ರಸಾರ ಮಾಡುವುದಾಗಿ ಬೆದರಿಕೆ ಒಡ್ಡಿರುತ್ತಾರೆ. ಪ್ರಕರಣದ ಅಪಾದಿತ ಮಹೇಶ್ ಶೆಟ್ಟಿಯನ್ನು ದಸ್ತಗಿರಿ ಮಾಡಿದ ಬಳಿಕ, ಅಪಾದಿತನು ಇಲಾಖಾ ಜೀಪಿನಲ್ಲಿ ಬರಲು ನಿರಾಕರಿಸಿ, ಆತನ ಖಾಸಗಿ ಕಾರಿನಲ್ಲಿ ಬಂದಿದ್ದು, ಆ ವೇಳೆ ಸ್ಥಳದಲ್ಲಿ ನೆರೆದಿದ್ದ ಜನರು, ಸುಮಾರು 10 ರಿಂದ 15 ಕಾರುಗಳನ್ನು ಹಿಂಬಾಲಿಸಿಕೊಂಡು ಬಂದು ಕರ್ತವ್ಯಕ್ಕೆ ಅಡ್ಡಿಪಡಿಸಿರುತ್ತಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 94/2025, ಕಲಂ 132, 189(2), 351(2), 263(ಎ), 190, 262 ಬಿ ಎನ್ ಎಸ್-2023 ರಂತೆ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ತಿಮರೋಡಿ ದಸ್ತಗಿರಿ ಮಾಡಲು ಬಂದಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪದಲ್ಲಿ ಗಿರೀಶ್ ಮಟ್ಟಣ್ಣವರ್, ಜಯಂತ್ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಎಫ್.ಐ.ಆರ್. ದಾಖಲು Rating: 5 Reviewed By: karavali Times
Scroll to Top