ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ರಕ್ಷಿಸಿದ ಪೊಲೀಸರು - Karavali Times ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ರಕ್ಷಿಸಿದ ಪೊಲೀಸರು - Karavali Times

728x90

5 August 2025

ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ರಕ್ಷಿಸಿದ ಪೊಲೀಸರು

ಮಂಗಳೂರು, ಆಗಸ್ಟ್ 05, 2025 (ಕರಾವಳಿ ಟೈಮ್ಸ್) : ಪಾವಂಜೆ ಸೇತುವೆ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ ವ್ಯಕ್ತಿಯನ್ನು 112 ವಾಹನದಲ್ಲಿ ಆಗಮಿಸಿದ ಪೊಲೀಸರು ರಕ್ಷಿಸಿದ್ದಾರೆ. 

ಮಂಗಳೂರು ನಗರ ಪೆÇಲೀಸ್ ಕಮೀಷನರೇಟ್ ವ್ಯಾಪ್ತಿಯ ಬರ್ಕೆ ಪೊಲೀಸ್ ಠಾಣಾ ಸರಹದ್ದಿಗೆ ಒಳಪಟ್ಟ ಪಿ.ವಿ.ಎಸ್. ಕಲಾಕುಂಜದ ಬಳಿಯ ನಿವಾಸಿ ವಿಶ್ವನಾಥ ಶೆಟ್ಟಿ (75) ಮಣ್ಣಗುಡ್ಡ ಅವರು ಸೋಮವಾರ ಬೆಳಿಗ್ಗೆ ಕುದ್ರೋಳಿ ದೇವಸ್ಥಾನಕ್ಕೆಂದು ಹೋದವರು ಮರಳಿ ಮನೆಗೆ ಬಂದಿಲ್ಲ ಎಂಬುದಾಗಿ ನಿತಿನ್ ಎಂಬವರು ಬರ್ಕೆ ಪೊಲೀಸ್ ಠಾಣೆಗೆ ನೀಡಿದ ಮಾಹಿತಿಯಂತೆ ಬರ್ಕೆ ಪೆÇಲೀಸ್ ಠಾಣೆಯ ಎಎಸ್ಸೈ ಸುಧಾಕರ್ ಅವರು ಇ ಆರ್ ಎಸ್ ಎಸ್-112 ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಈ ವೇಳೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇ ಆರ್ ಎಸ್ ಎಸ್-112 ಕರ್ತವ್ಯದಲ್ಲಿದ್ದ ಪೊಲೀಸರಾದ ಯೊಗೀಶ್, ಕಿಶೋರ್ ಕುಮಾರ್ ಹಾಗೂ ಮಧುಕರ್ ಅವರುಗಳು ಮಾಹಿತಿ ಸ್ವೀಕರಿಸಿ ತಕ್ಷಣ ಕಾರ್ಯಪ್ರವೃತ್ತರಾಗಿ ಪಾವಂಜೆ ಸೇತುವೆ ಬಳಿ ತೆರಳಿದಾಗ ಸೇತುವೆ ದಂಡೆಯ ಮೇಲಿನಿಂದ ನದಿಗೆ ಹಾರಲು ಪ್ರಯತ್ನಿಸುತ್ತಿದ್ದ ವಿಶ್ವನಾಥ ಶೆಟ್ಟಿಯನ್ನು ಸಾರ್ವಜನಿಕರ ಸಹಕಾರದೊಂದಿಗೆ ಸಕಾಲದಲ್ಲಿ ತಡೆದು ಅವರ ಜೀವರಕ್ಷಣೆ ಮಾಡಿರುತ್ತಾರೆ. 

ಈ ಸಂದರ್ಭ ಮಾಹಿತಿ ಕಲೆ ಹಾಕಿದಾಗ ವಿಶ್ವನಾಥ ಶೆಟ್ಟಿ ಅವರು ಚರ್ಮದ ಖಾಯಿಲೆಯಿಂದ ಬಳಲುತ್ತಿರುವ ವಿಚಾರದಿಂದ ಮನನೊಂದು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ. ಬಳಿಕ ಅವರನ್ನು ಅವರ ಸಹೋದರಿ ವಾಣಿ ಶೆಟ್ಟಿ ಹಾಗೂ ಮಾಜಿ ಕಾಪೊÇರೇಟರ್ ಪ್ರಕಾಶ್ ಅವರ ಜೊತೆಗೆ ಕಳುಹಿಸಿಕೊಡಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ರಕ್ಷಿಸಿದ ಪೊಲೀಸರು Rating: 5 Reviewed By: karavali Times
Scroll to Top