ಬಂಟ್ವಾಳ, ಆಗಸ್ಟ್ 22, 2025 (ಕರಾವಳಿ ಟೈಮ್ಸ್) : ಯುವ ಜನತೆಯಲ್ಲಿ ಭಾವನೆಗಳು ಶುದ್ಧವಾಗಿದ್ದರೆ ಆರೋಗ್ಯಕರ ಸಮಾಜ ನಿರ್ಮಾಣವಾಗಲು ಸಹಕಾರಿಯಾಗುತ್ತದೆ. ಎಲ್ಲರೂ ಭೇದ ಭಾವ ಮರೆತು ಒಂದಾದಲ್ಲಿ ಉತ್ತಮ ಪರಿಸರ ನಿರ್ಮಿಸಲು ಸಾಧ್ಯ ಎಂದು ಬಂಟ್ವಾಳ ಎಸ್ ವಿ ಎಸ್ ಕಾಲೇಜು ಪ್ರಾಂಶುಪಾಲ ಎಂ ಡಿ ಮಂಚಿ ಹೇಳಿದರು.
ಕಾಲೇಜಿನ ಎನ್ ಎಸ್ ಎಸ್ ಘಟಕದಿಂದ ಆಯೋಜಿಸಿದ್ದ ‘ಸದ್ಭಾವನ ದಿನ’ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ ಪ್ರತಿಜ್ಞಾವಿಧಿ ಬೋಧಿಸಿದರು. ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿ ಡಾ ಕಾಶೀನಾಥ ಶಾಸ್ತ್ರಿ ಎಚ್ ವಿ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶಿವಣ್ಣ ಪ್ರಭು ಉಪಸ್ಥಿತರಿದ್ದರು.
0 comments:
Post a Comment