ಕರಾಟೆ ಸ್ಪರ್ಧೆ : ಅಮ್ಟೂರು ದೇವಮಾತಾ ಶಾಲಾ ವಿದ್ಯಾರ್ಥಿ ಮಿಕ್ದಾದ್ ರಾಜ್ಯಮಟ್ಟಕ್ಕೆ ಆಯ್ಕೆ - Karavali Times ಕರಾಟೆ ಸ್ಪರ್ಧೆ : ಅಮ್ಟೂರು ದೇವಮಾತಾ ಶಾಲಾ ವಿದ್ಯಾರ್ಥಿ ಮಿಕ್ದಾದ್ ರಾಜ್ಯಮಟ್ಟಕ್ಕೆ ಆಯ್ಕೆ - Karavali Times

728x90

26 August 2025

ಕರಾಟೆ ಸ್ಪರ್ಧೆ : ಅಮ್ಟೂರು ದೇವಮಾತಾ ಶಾಲಾ ವಿದ್ಯಾರ್ಥಿ ಮಿಕ್ದಾದ್ ರಾಜ್ಯಮಟ್ಟಕ್ಕೆ ಆಯ್ಕೆ

ಬಂಟ್ವಾಳ, ಆಗಸ್ಟ್ 26, 2025 (ಕರಾವಳಿ ಟೈಮ್ಸ್) : ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದ ಕರಾಟೆ ಸ್ಪರ್ಧೆಯಲ್ಲಿ ತಾಲೂಕಿನ ಅಮ್ಟೂರು-ಕರಿಂಗಾಣ ದೇವಮಾತಾ ಆಂಗ್ಲ ಮಾಧ್ಯಮ ಶಾಲಾ 6ನೇ ತರಗತಿ ವಿದ್ಯಾರ್ಥಿ ಎಂ ಎಚ್ ಮುಹಮ್ಮದ್ ಮಿಕ್ದಾದ್ ಪ್ರಥಮ ಸ್ಥಾನಿಯಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ದಕ್ಷಿಣ ಕನ್ನಡ ಶಾಲಾ ಶಿಕ್ಷಣ ಇಲಾಖೆ ವತಿಯಿಂದ 2025-2026ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ ಇತ್ತೀಚೆಗೆ ಉಳ್ಳಾಲ ತಾಲೂಕಿನ ಉಚ್ಚಿಲಗುಡ್ಡೆಯ ಪಿ ಎಂ ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿತ್ತು. 

ಜಿಲ್ಲಾ ಮಟ್ಟದ ಈ ಕ್ರೀಡಾಕೂಟದಲ್ಲಿ ಅಂಡರ್-14 ಬಾಲಕರ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಮಿಕ್ದಾದ್ ಈ ಸಾಧನೆ ಮಾಡಿದ್ದಾನೆ. ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದ ಈತ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. ಜುಲೈ ತಿಂಗಳಲ್ಲಿ ಬಂಟ್ವಾಳ ತಾಲೂಕು ಮಟ್ಟದಲ್ಲಿ ನಡೆದಿದ್ದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದ ಈತ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದ. 

ಈತ ಪಾಣೆಮಂಗಳೂರು-ಮೆಲ್ಕಾರ್ ಸಮೀಪದ ಬೋಳಂಗಡಿ ನಿವಾಸಿ ಎಂ ಎಚ್ ಮುಸ್ತಫಾ-ಫಾಮಿದಾ ದಂಪತಿಯ ಪುತ್ರನಾಗಿದ್ದಾನೆ.

  • Blogger Comments
  • Facebook Comments

0 comments:

Post a Comment

Item Reviewed: ಕರಾಟೆ ಸ್ಪರ್ಧೆ : ಅಮ್ಟೂರು ದೇವಮಾತಾ ಶಾಲಾ ವಿದ್ಯಾರ್ಥಿ ಮಿಕ್ದಾದ್ ರಾಜ್ಯಮಟ್ಟಕ್ಕೆ ಆಯ್ಕೆ Rating: 5 Reviewed By: karavali Times
Scroll to Top