ಬಂಟ್ವಾಳ, ಆಗಸ್ಟ್ 31, 2025 (ಕರಾವಳಿ ಟೈಮ್ಸ್) : ಆರೋಗ್ಯವಂತ ಪ್ರಜೆ ದೇಶದ ನಿಜವಾದ ಆಸ್ತಿಯಾಗಿದ್ದು, ಈ ಆಸ್ತಿ ಲಭ್ಯವಾಗಬೇಕಾದರೆ ಶಾಲೆಗಳಲ್ಲಿ ಪಠ್ಯದೊಂದಿಗೆ ಕ್ರೀಡೆಗೂ ಮಹತ್ವ ನೀಡಬೇಕು ಎಂದು ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ ಅಭಿಪ್ರಾಯಪಟ್ಟರು.
ಬೋಳಂತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸುರಿಬೈಲು ದಾರುಲ್ ಅಶ್-ಅರಿಯ್ಯ ಆಂಗ್ಲ ಮಾಧ್ಯಮ ಶಾಲೆ ಇವುಗಳ ಜಂಟಿ ಆಶ್ರಯದಲ್ಲಿ ಬೋಳಂತೂರು ಸರಕಾರಿ ಶಾಲೆಯಲ್ಲಿ ಇತ್ತೀಚೆಗೆ ನಡೆದ ಕಲ್ಲಡ್ಕ ವಲಯ ಮಟ್ಟದ 14 ಹಾಗೂ 17ನೇ ವರ್ಷ ವಯೋಮಿತಿಯ ಶಾಲಾ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕ್ರೀಡಾಕೂಟಗಳಲ್ಲಿ ಶಿಸ್ತು ಮುಖ್ಯವಾಗಿದೆ. ಶಿಸ್ತನ್ನು ಮೈಗೂಡಿಸಿಕೊಂಡರೆ ಉತ್ತಮ ಕ್ರೀಡಾಪಟುವಾಗಿ ಹೊರಹೊಮ್ಮಲು ಸಾಧ್ಯವಾಗುತ್ತದೆ ಎಂದರು.
ಬೋಳಂತೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಾಲಿನಿ ಕ್ರೀಡಾಕೂಟ ಉದ್ಘಾಟಿಸಿದರು. ಬೋಳಂತೂರು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬಶೀರ್ ನಾರಂಕೋಡಿ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀಮತಿ ಆಶಾ ನಾಯಕ್ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ಬೋಳಂತೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಯಾಕೂಬ್ ಡಿ, ಸದಸ್ಯರುಗಳಾದ ಚಂದ್ರಶೇಖರ ರೈ, ಶ್ರೀಮತಿ ಸಂಧ್ಯಾ, ಅನ್ಸರ್, ನಿವೃತ್ತ ದೈಹಿಕ ಶಿಕ್ಷಕ ಶಂಕರ್, ನಿವೃತ್ತ ಶಿಕ್ಷಕ ಕೂಸಪ್ಪ ಮಾಸ್ಟರ್, ಬಂಟ್ವಾಳ ಸರಕಾರಿ ನೌಕರರ ಸಂಘದ ಕಾರ್ಯದರ್ಶಿ ಸಂತೋಷ್, ಗ್ರೇಡ್-2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಬಂಟ್ವಾಳ ಘಟಕಾಧ್ಯಕ್ಷ ಇಂದುಶೇಖರ್, ಬೋಳಂತೂರು ಪಂಚಾಯತ್ ಕಾರ್ಯದರ್ಶಿ ಅಶ್ರಫ್, ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಹಮೀದ್ ಟೈಲರ್, ಕಲ್ಲಡ್ಕ ಕ್ಲಸ್ಟರ್ ಸಿ ಆರ್ ಪಿ ಶ್ರೀಮತಿ ಜ್ಯೋತಿ, ಕ್ರೀಡಾ ಕೂಟದ ನೋಡಲ್ ಅಧಿಕಾರಿಗಳಾದ ಜಗದೀಶ್ ಕೆ, ಪ್ರಕಾಶ್, ಪ್ರಾಥಮಿಕ ಶಾಲಾ ಜಿಲ್ಲಾ ಸಂಘದ ಅಧ್ಯಕ್ಷ ಶಿವಪ್ರಸಾದ ಶೆಟ್ಟಿ, ಅಕ್ಷಯ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಝಕರಿಯಾ ನಾರ್ಶ, ಸಂಚಾಲಕ ಕರೀಂ ಕದ್ಕಾರ್, ಕಾರ್ಯದರ್ಶಿ ಲತೀಫ್ ಪರ್ತಿಪ್ಪಾಡಿ, ಅಂಬಿಕಾ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಸಚಿನ್ ಕುಮಾರ್, ಉತ್ತಮ ನಗರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾಜಿದ್ ಉಳ್ಳಾಲ, ಬೋಳಂತೂರು ಭೀಮ್ ಸಂಜೀವಿನಿ ಅಧ್ಯಕ್ಷ ಸದಾನಂದ, ಗೌರವಾಧ್ಯಕ್ಷ ಶ್ರೀನಿವಾಸ ಬಂಗಾರ ಕೋಡಿ, ಹಳೆ ವಿದ್ಯಾರ್ಥಿ ಸಂಘದ ಗೌರವ ಸಂಚಾಲಕ ಜಯರಾಜ್ ಬಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮ್ಯಾಮ ಕುಂಞ ಮೊದಲಾದವರು ಅತಿಥಿಗಳಾಗಿ ಭಾಗವಹಿಸಿದ್ದರು.
0 comments:
Post a Comment