ಬಂಟ್ವಾಳ, ಆಗಸ್ಟ್ 22, 2025 (ಕರಾವಳಿ ಟೈಮ್ಸ್) : ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸದಸ್ಯರಾಗಿ ಬೆಳೆಸಾಲ ಪಡೆದು ಮೃತರಾದ ಸದಸ್ಯರಿಗೆ ಆರ್ಥಿಕ ಸಹಾಯ ನೀಡುವ ಉದ್ದೇಶದಿಂದ ರೈತ ಕಲ್ಯಾಣ ನಿಧಿ ಯೋಜನೆಯಡಿಯಲ್ಲಿ ಮರಣ ಹೊಂದಿದ ಕುಟುಂಬದ ನಾಮಿನಿ 22 ಸದಸ್ಯರುಗಳಿಗೆ ತಲಾ 10 ಸಾವಿರದಂತೆ 2.20 ಲಕ್ಷ ರೂಪಾಯಿ ರೈತ ಕಲ್ಯಾಣ ನಿಧಿ ಇತ್ತೀಚೆಗೆ ಸಂಘದ ಬೆಳ್ಳಿಪ್ಪಾಡಿ ಕೃಷ್ಣ ರೈ ರೈತ ಸಭಾಂಗಣದಲ್ಲಿ ವಿತರಿಸಲಾಯಿತು. ಸಿದ್ದಕಟ್ಟೆ ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷ ರತ್ನಕುಮಾರ್ ಚೌಟ ಮುಖ್ಯ ಅತಿಥಿಯಾಗಿ ಭಾಗವಹಿಸಿ ರೈತ ಫಲಾನುಭವಿಗಳಿಗೆ ಕಲ್ಯಾಣ ನಿಧಿ ವಿತರಿಸಿದರು.
ಈ ವೇಳೆ ಮಾತನಾಡಿದ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು, ಬೆಳೆ ಸಾಲ ಪಡೆದುಕೊಂಡು ಸಂಘದಲ್ಲಿ ವ್ಯವಹಾರ ಮಾಡಿಕೊಂಡು ಬರುತ್ತಿದ್ದ ರೈತ ಸದಸ್ಯರು ಮರಣ ಹೊಂದಿದಾಗ ಕುಟುಂಬಕ್ಕೆ ಆರ್ಥಿಕ ಸಹಕಾರ ನೀಡುವ ಉದ್ದೇಶದಿಂದ ಸಂಘವು ರೈತ ಕಲ್ಯಾಣ ನಿಧಿ ಯೋಜನೆಯನ್ನು ಸ್ಥಾಪಿಸಿ, ಸದ್ರಿ ಯೋಜನೆಯಡಿಯಲ್ಲಿ ಮೃತ ಸದಸ್ಯರ ಕುಟುಂಬಕ್ಕೆ ಸಹಾಯ ಮಾಡುತ್ತಿದೆ ಎಂದರು.
ಈ ಸಂದರ್ಭ ಸಂಘದ ಉಪಾಧ್ಯಕ್ಷ ಸಂದೇಶ್ ಶೆಟ್ಟಿ ಪೆÇಡುಂಬ, ನಿರ್ದೇಶಕರಾದ ಸತೀಶ್ ಪೂಜಾರಿ, ದಿನೇಶ್ ಪೂಜಾರಿ, ರಶ್ಮಿತ್ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ಜಾರಪ್ಪ ನಾಯ್ಕ, ವೀರಪ್ಪ ಪರವ, ವಿಶ್ವನಾಥ ಶೆಟ್ಟಿಗಾರ್, ಎ ಶಿವ ಗೌಡ, ಮಂದಾರತಿ ಎಸ್ ಶೆಟ್ಟಿ, ಪುಷ್ಪಲತಾ ಎಸ್ ಆರ್ ಹಾಗೂ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ, ಸಿಬ್ಬಂದಿ ಸುಭಾಸ್ ಬಂಗೇರ ಉಪಸ್ಥಿತರಿದ್ದರು.
0 comments:
Post a Comment