ಬಂಟ್ವಾಳ, ಆಗಸ್ಟ್ 18, 2025 (ಕರಾವಳಿ ಟೈಮ್ಸ್) : ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ಮನೆ ಪಕ್ಕದ ದನದ ಹಟ್ಟಿಯಲ್ಲಿ ಮಾಡಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಕಸಬಾ ಗ್ರಾಮದ ದೇವಸ್ಯ ಎಂಬಲ್ಲಿ ಆಗಸ್ಟ್ 17 ರಂದು ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಎನ್ ಎಸ್ ಕಿಶನ್ ಭಟ್ (56) ಎಂದು ಹೆಸರಿಸಲಾಗಿದೆ. ಇವರು ಕಳೆದ ಹಲವು ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದು, ಆಗಸ್ಟ್ 17 ರಂದು ಮನೆ ಪಕ್ಕದ ದನದ ಹಟ್ಟಿಯ ಮಾಡಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ಪತ್ನಿ ಉಷಾ ಕಿಶನ್ ಭಟ್ ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.
0 comments:
Post a Comment