ಬಂಟ್ವಾಳ, ಆಗಸ್ಟ್ 05, 2025 (ಕರಾವಳಿ ಟೈಮ್ಸ್) : ಅಟೋ ರಿಕ್ಷಾ ಡಿಕ್ಕಿ ಹೊಡೆದು ಬೈಕ್ ಸವಾರ ಗಾಯಗೊಂಡ ಘಟನೆ ವಿಟ್ಲ ಕಸಬಾ ಗ್ರಾಮದ ವಿಟ್ಲ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಆಗಸ್ಟ್ 3 ರಂದು ಸಂಭವಿಸಿದೆ.
ಗಾಯಗೊಂಡ ಬೈಕ್ ಸವಾರನನ್ನು ಉದಯ ಶಂಕರ ಎಂ ಎಂದು ಹೆಸರಿಸಲಾಗಿದೆ. ಇವರು ವಿಟ್ಲ ಪೇಟೆಯಿಂದ ಪೆರ್ಲ ಕಡೆಗೆ ಸಂಚರಿಸುತ್ತಿದ್ದ ವೇಳೆ ಕೇಪು ಕಡೆಯಿಂದ ವಿಟ್ಲ ಕಡೆಗೆ ಸಂಚರಿಸುತ್ತಿದ್ದ ರಾಮಚಂದ್ರ ಕೆ ಎಂಬವರು ಚಲಾಯಿಸಿಕೊಂಡು ಬಂದ ಅಟೋ ರಿಕ್ಷಾ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ಉದಯ ಶಂಕರ ಅವರು ಬೈಕ್ ಸಮೇತ ರಸ್ತೆಗೆ ಬಿದ್ದು ಹಣೆ ಹಾಗೂ ಕಾಲಿಗೆ ಗಾಯವಾಗಿದೆ. ತಕ್ಷಣ ಅವರನ್ನು ವಿಟ್ಲ ಸರಕಾರಿ ಸಮುದಾಯ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಿ ಮನೆಗೆ ಬಂದಿದ್ದು, ರಾತ್ರಿ ವೇಳೆ ಮತ್ತೆ ವಿಪರೀತ ತಲೆ ನೋವು ಹಾಗೂ ವಾಂತಿ ಉಂಟಾದ ಕಾರಣ ಮತ್ತೆ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment