ಮಂಗಳೂರು, ಆಗಸ್ಟ್ 26, 2025 (ಕರಾವಳಿ ಟೈಮ್ಸ್) : ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಪರಿಶಿಷ್ಟ ಪಂಗಡದ ಜನಾಂಗದ ಏಳಿಗೆಗಾಗಿ ಶ್ರಮಿಸಿದ ಪರಿಶಿಷ್ಟ ಪಂಗಡಕ್ಕೆ ಸೇರಿದ ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ ಹಾಗೂ ಇತರ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ರಾಜ್ಯ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಿ ಗೌರವಿಸಲು ಅರ್ಜಿ ಆಹ್ವಾನಿಸಲಾಗಿದೆ.
ಅಕ್ಟೋಬರ್ 7 ರಂದು ನಡೆಯುವ ರಾಜ್ಯ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಪ್ರಶಸ್ತಿಯನ್ನು ನೀಡಲಾಗುತ್ತದೆ. ಸೆಪ್ಟೆಂಬರ್ 10 ಅರ್ಜಿ ಸಲ್ಲಿಸಲು ಕೊನೆಯ ದಿನ ಆಗಿರುತ್ತದೆ. ಅರ್ಜಿ ಸಲ್ಲಿಸುವವರು ಪರಿಶಿಷ್ಟ ಪಂಗಡ ಸಮುದಾಯಕ್ಕೆ ಸೇರಿದವರಾಗಿದ್ದು, ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಮಾಡಿರುವ ಸಾಧನೆಗಳ ಬಗ್ಗೆ ದಾಖಲಾತಿ ಹೊಂದಿರಬೇಕು. ಅರ್ಜಿದಾರರ ವಯಸ್ಸು ಕನಿಷ್ಠ 35 ವರ್ಷಗಳಾಗಿರಬೇಕು.
ನಿಗದಿತ ಅರ್ಜಿ ನಮೂನೆಗಳನ್ನು ಆಯಾ ತಾಲೂಕಿನ ಸಹಾಯಕ ನಿರ್ದೇಶಕರು (ಗ್ರೇಡ್-1 ಹಾಗೂ 2), ಸಮಾಜ ಕಲ್ಯಾಣ ಇಲಾಖೆ, ಆಥವಾ ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರ ಕಚೇರಿಯಿಂದ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ (ದೂರವಾಣಿ ಸಂಖ್ಯೆ 0824-2451269) ಸಂಪರ್ಕಿಸಬಹುದು ಎಂದು ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.































0 comments:
Post a Comment