ಬೆಳ್ತಂಗಡಿ, ಆಗಸ್ಟ್ 03, 2025 (ಕರಾವಳಿ ಟೈಮ್ಸ್) : ಸಾಮಾಜಿಕ ಜಾಲತಾಣದಲ್ಲಿ ಕೋಮುಸೌಹಾರ್ಧತೆಗೆ ದಕ್ಕೆಯಾಗುವಂತಹ ಸಂದೇಶವನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಫೇಸ್ ಬುಕ್ ಖಾತೆ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಉಜಿರೆ ನಿವಾಸಿ ಕಲಂದರ್ ಪುತ್ತುಮೋನು (42) ಎಂಬವರು ಪೊಲೀಸರಿಗೆ ದೂರು ನೀಡಿದ್ದು, ಇವರು ತನ್ನ ಸಾಮಾಜಿಕ ಜಾಲತಾಣವನ್ನು ಪರಿಶೀಲಿಸುತ್ತಿದ್ದಾಗ, ಸಾಮಾಜಿಕ ಜಾಲತಾಣವಾದ ಪೇಸ್ ಬುಕ್ ತಾಣದ “ಕುಲುಮೆ” ಎಂಬ ಗುಂಪಿನಲ್ಲಿ “ಐಶು ಐಶಾ” ಎಂಬ ಫೇಸ್ ಬುಕ್ ಖಾತೆ ಹೊಂದಿರುವ ವ್ಯಕ್ತಿಯು, ವಿಭಿನ್ನ ಕೋಮುಗಳ ನಡುವೆ ವೈಮನಸ್ಸು ಉಂಟಾಗುವಂತಹ ಸುಳ್ಳು ವದಂತಿಗಳಿರುವ ವರದಿಯನ್ನು ಪ್ರಸಾರ ಮಾಡಿರುವುದು ಕಂಡುಬಂದಿರುತ್ತದೆ ಎಂದು ನೀಡಿರುವ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 70/2025, ಕಲಂ 353 (1)(ಬಿ), 353(2) ಬಿ ಎನ್ ಎಸ್ ಪ್ರಕಾರ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
0 comments:
Post a Comment