ಬಂಟ್ವಾಳ, ಆಗಸ್ಟ್ 08, 2025 (ಕರಾವಳಿ ಟೈಮ್ಸ್) : ಕೇರಳದಿಂದ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಪೆರುವಾಯಿ ಗ್ರಾಮ ಪಂಚಾಯತ್ ಬಳಿ ಬುಧವಾರ ನಡೆದಿದೆ.
ವಿಟ್ಲ ಪೊಲೀಸ್ ಠಾಣಾ ಪಿಎಸ್ಸೈ ರಾಮಕೃಷ್ಣ ಅವರ ನೇತೃತ್ವದ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಪೆರುವಾಯಿ ಗ್ರಾಮದ ಪೆರುವಾಯಿ ಗ್ರಾಮ ಪಂಚಾಯತ್ ಬಳಿ ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಬೆರಿಪದವು ಕಡೆಯಿಂದ ಬಂದ ಈಚರ್ ಲಾರಿಯನ್ನು ನಿಲ್ಲಿಸಿ ಪರಿಶೀಲನೆ ನಡೆಸಿದಾಗ ಅಕ್ರಮ ಕೆಂಪು ಕಲ್ಲು ಸಾಗಾಟ ಪ್ರಕರಣ ಬೆಳಕಿಗೆ ಬಂದಿದೆ. 7.5 ಸಾವಿರ ರೂಪಾಯಿ ಮೌಲ್ಯದ 270 ಕೆಂಪುಕಲ್ಲು, 12 ಲಕ್ಷ ಮೌಲ್ಯದ ಲಾರಿ ಸಹಿತ ಲಾರಿ ಚಾಲಕ ವಿಟ್ಲ ಕಸಬಾ ಗ್ರಾಮದ ದಾಸರಬೆಟ್ಟು ನಿವಾಸಿ ಮಹಮ್ಮದ್ ಮುಸ್ತಫಾ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಕೇರಳ ರಾಜ್ಯದ ಧರ್ಮತ್ತಡ್ಕ ಎಂಬಲ್ಲಿಂದ ಸಲಾಂ ಉಕ್ಕುಡ ಮತ್ತು ಅಶ್ರಫ್ ಧರ್ಮತ್ತಡ್ಕ ಎಂಬವರು ಅಕ್ರಮವಾಗಿ ಲಾರಿಯಲ್ಲಿ ತುಂಬಿಸಿ ಕಳುಹಿಸಿದ ಕೆಂಪು ಕಲ್ಲುಗಳನ್ನು ಯಾವುದೇ ಪರವಾನಿಗೆ ಇಲ್ಲದೇ ಸಾಗಾಟ ಮಾಡಿಕೊಂಡು ಬಂದಿರುವುದಾಗಿ ಲಾರಿ ಚಾಲಕ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಈ ಬಗ್ಗೆ ವಿಟ್ಲ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment