ಬಂಟ್ವಾಳ, ಸೆಪ್ಟೆಂಬರ್ 17, 2025 (ಕರಾವಳಿ ಟೈಮ್ಸ್) : ತಾಲೂಕಿನ ಅಳಿಕೆ ಗ್ರಾಮದ ಎರುಂಬು ರಸ್ತೆ ಎಂಬಲ್ಲಿ ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನಿಸಿದ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ವಿಟ್ಲ ಪೊಲೀಸರು ನಾಲ್ವರನ್ನು ಬಂಧಿಸಿದ ಘಟನೆ ಸೋಮವಾರ ನಡೆದಿದೆ.
ಬಂಧಿತ ಆರೋಪಿಗಳನ್ನು ವಿಟ್ಲ ಕಸಬಾ ಗ್ರಾಮದ ಮಂಗಳಪದವು ನಿವಾಸಿಗಳಾದ ಸನತ್ ಕುಮಾರ್ (23), ಮುಹಮ್ಮದ್ ರಾಝಿಕ್ (23), ಚೇತನ್ (23) ಹಾಗೂ ಎರ್ಮೆಮಜಲು ನಿವಾಸಿ ಧ್ಯಾನ್ ಕರ್ಕೇರಾ (23) ಎಂದು ಹೆಸರಿಸಲಾಗಿದೆ. ಆರೋಪಿಗಳ ಪೈಕಿ ಮೂವರನ್ನು ಪೊಲೀಸರು ಸ್ಥಳದಲ್ಲೇ ರೆಡ್ ಹ್ಯಾಂಡಾಗಿ ಬಂಧಿಸಿದರೆ, ಆರೋಪಿ ಧ್ಯಾನ್ ಕರ್ಕೇರಾನನ್ನು ತನಿಖೆ ನಡೆಸಿದ ಬಳಿಕ ಬಂಧಿಸಿದ್ದಾರೆ.
ಸೆ 15 ರಂದು ವಿಟ್ಲ ಪೆÇಲೀಸ್ ಠಾಣಾ ಪಿಎಸ್ಸೈ ರಾಮಕೃಷ್ಣ ಅವರ ನೇತೃತ್ವದ ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಬಂದ ಖಚಿತ ಮಾಹಿತಿ ಮೇರೆಗೆ ಅಳಿಕೆ ಗ್ರಾಮದ ಎರುಂಬು ರಸ್ತೆ ಎಂಬಲ್ಲಿ ದ್ವಿಚಕ್ರ ವಾಹನದೊಂದಿಗೆ ಅನುಮಾಸ್ಪದವಾಗಿ ಮತ್ತು ಸಂಶಯಾಸ್ಪದವಾಗಿ ನಿಂತುಕೊಂಡಿದ್ದ ಮೂವರನ್ನು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಪೊಲೀಸರು ಆರೋಪಿಗಳನ್ನು ತಪಾಸಣೆ ನಡೆಸಿದಾಗ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಬೈಕಿನಲ್ಲಿ ಅಕ್ರಮವಾಗಿ ಸ್ವಾಧೀನದಲ್ಲಿಟ್ಟುಕೊಂಡು ಗಿರಾಕಿಗಳಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿರುವುದು ಬೆಳಕಿಗೆ ಬಂದಿದ್ದು, ಪೊಲೀಸರು ಅವರನ್ನು ವಶಕ್ಕೆ ಪಡೆದು ಅವರ ಬಳಿಯಿದ್ದ 6.27 ಗ್ರಾಂ ತೂಕದ ಗಾಂಜಾ, 3 ಮೊಬೈಲ್ ಫೋನುಗಳು, ಸಣ್ಣ ಚೂರಿ ಹಾಗೂ ಬೈಕನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment