ಮಂಗಳೂರು, ಸೆಪ್ಟೆಂಬರ್ 07, 2025 (ಕರಾವಳಿ ಟೈಮ್ಸ್) : ಮಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ ಸ್ಫೋಟಿಸುವುದಾಗಿ ಬೆದರಿಕೆ ಕರೆ ಮಾಡಿದ ಪ್ರಕರಣ ಬೇಧಿಸಿದ ಬಜ್ಪೆ ಪೊಲೀಸರು ಆರೋಪಿ ತಮಿಳ್ನಾಡು ಮೂಲದ ವ್ಯಕ್ತಿಯನ್ನು ದಸ್ತಗಿರಿ ಮಾಡುವಲ್ಲಿ ಸಫಲರಾಗಿದ್ದಾರೆ.
ಬಂಧಿತ ವ್ಯಕ್ತಿಯನ್ನು ತಮಿಳ್ನಾಡು ರಾಜ್ಯದ ವೆಲ್ಲೂರು ಜಿಲ್ಲೆಯ ನಿವಾಸಿ ಎಂ ಡಿ ಸಂಪತ್ ಎಂಬವರ ಪುತ್ರ ಸಸಿಕುಮಾರ್ (38) ಎಂದು ಹೆಸರಿಸಲಾಗಿದೆ. ಆಗಸ್ಟ್ 29 ರಂದು ರಾತ್ರಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅನಾಮಿಕ ವ್ಯಕ್ತಿ ಫೆÇೀನ್ ಕರೆ ಮಾಡಿ ಟರ್ಮಿನಲ್ ಬಿಲ್ಡಿಂಗ್ ಖಾಲಿ ಮಾಡಬೇಕು. ಇಲ್ಲವಾದರೆ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿರುತ್ತಾನೆ. ಈ ಬಗ್ಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಡ್ಯೂಟಿ ಟರ್ಮಿನಲ್ ಮ್ಯಾನೇಜರ್ ಬಜಪೆ ಪೆÇಲೀಸ್ ಠಾಣೆಗೆ ನೀಡಿದ ದೂರಿನ ಆಧಾರದಲ್ಲಿ ಮೊಕದ್ದಮೆ ದಾಖಲಾಗಿತ್ತು.
ಪ್ರಕರಣದ ಬಗ್ಗೆ ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ತಮಿಳ್ನಾಡಿನ ವೆಲ್ಲೂರಿನಲ್ಲಿ ಬಂಧಿಸುವಲ್ಲಿ ಸಫಲರಾಗಿದ್ದಾರೆ. ಈತನನ್ನು ವಿಚಾರಣೆ ನಡೆಸಿದಾಗ ಈತ ದೇಶದ ಎಲ್ಲಾ ವಿಮಾನ ನಿಲ್ದಾಣಗಳ ಮೊಬೈಲ್ ಸಂಖ್ಯೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಸರ್ಚ್ ಮಾಡಿ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದ. ಅದೇ ರೀತಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಫೆÇೀನ್ ಮಾಡಿ ಟರ್ಮಿನಲ್ ಬಿಲ್ಡಿಂಗ್ ಖಾಲಿ ಮಾಡಲು ತಿಳಿಸಿ ಖಾಲಿ ಮಾಡದೆ ಹೋದರೆ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿರುವುದಾಗಿ ತಿಳಿಸಿದ್ದಾನೆ. ಬಂಧಿತ ಆರೋಪಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
0 comments:
Post a Comment