ಬೆಳ್ತಂಗಡಿ, ಸೆಪ್ಟೆಂಬರ್ 17, 2025 (ಕರಾವಳಿ ಟೈಮ್ಸ್) : ಮಹೇಶ್ ಶೆಟ್ಟಿ ತಿಮರೋಡಿ ಅವರ ಉಜಿರೆ ಗ್ರಾಮದಲ್ಲಿರುವ ಮನೆಯಲ್ಲಿ ಎಸ್ ಐ ಟಿ ಅಧಿಕಾರಿಗಳು ನ್ಯಾಯಾಲಯದಿಂದ ಸರ್ಚ್ ವಾರಂಟ್ ಮೇರೆಗೆ ಶೋಧ ಕಾರ್ಯ ನಡೆಸುತ್ತಿದ್ದ ವೇಳೆ ಬಂದೂಕು ಹಾಗೂ ತಲವಾರು ಪತ್ತೆಯಾದ ಬಗ್ಗೆ ಎಸ್ ಐ ಟಿ ಅಧಿಕಾರಿಗಳು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಧರ್ಮಸ್ಥಳ ಪೆÇಲೀಸ್ ಠಾಣಾ ಅಪರಾಧ ಕ್ರಮಾಂಕ 39/2025 ಕಲಂ 211(ಎ), 336, 230, 231, 229, 227, 228, 240, 236, 233, 248 ಬಿ ಎನ್ ಎಸ್-2023 ಪ್ರಕರಣಕ್ಕೆ ಸಂಬಂದಿಸಿದಂತೆ ಎಸ್ ಐ ಟಿ ಸಂಸ್ಥೆಯಲ್ಲಿ, ಪ್ರಕರಣದ ತನಿಖಾಧಿಕಾರಿಗಳು ಆಗಸ್ಟ್ 26 ರಂದು ತನಿಖೆ ಮುಂದುವರಿಸಿ, ನ್ಯಾಯಾಲಯದಿಂದ ಶೋಧನಾ ವಾರೆಂಟ್ ಪಡೆದು ಪಂಚರು, ಸಿಬ್ಬಂದಿಗಳು, ಸೋಕೋ ಅಧಿಕಾರಿಗಳು ಹಾಗೂ ಎಸ್ ಐ ಟಿ ತಂಡದ ಸದಸ್ಯರ ಜೊತೆಗೆ ಉಜಿರೆ ಗ್ರಾಮದಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ಎಂಬವರ ಮನೆಯನ್ನು ಶೋಧನೆ ನಡೆಸಿದ್ದು ಅಲ್ಲಿ ಸಿಕ್ಕಿರುವ ಸ್ವತ್ತುಗಳನ್ನು ಸ್ವಾದೀನಪಡಿಸಿಕೊಂಡು ಮುಂದಿನ ಕಾನೂನು ಕ್ರಮದ ಬಗ್ಗೆ ನ್ಯಾಯಾಲಯಕ್ಕೆ ನಿವೇದಿಸಿಕೊಂಡಿರುತ್ತಾರೆ. ಆಗಸ್ಟ್ 26 ರಂದು ಮಹೇಶ್ ಶೆಟ್ಟಿ ತಿಮರೋಡಿಯವರ ಮನೆಯನ್ನು ಶೋಧಿಸುವ ಸಮಯದಲ್ಲಿ ಒಂದು ಬಂದೂಕು ಹಾಗ ಎರಡು ತಲವಾರು ಪತ್ತೆಯಾಗಿರುವ ಬಗ್ಗೆ ಎಸ್ ಐ ಟಿ ಅಧಿಕಾರಿಯವರು ಪೆÇಲೀಸ್ ಅಧೀಕ್ಷಕರಿಗೆ ದೂರು ನೀಡಿರುವುದಾಗಿದೆ. ಈ ಬಗ್ಗೆ ಪರಿಶೀಲಿಸಿ ಸೆ 16 ರಂದು ಬೆಳ್ತಂಗಡಿ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 108/2025 ಕಲಂ: 25(1)(1-ಎ) ಮತ್ತು 25(1)(1-ಬಿ)(ಎ) ಶಸ್ತ್ರಾಸ್ತ್ರ ಕಾಯ್ದೆಯಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
0 comments:
Post a Comment