ಬಂಟ್ವಾಳ, ಸೆಪ್ಟೆಂಬರ್ 12, 2025 (ಕರಾವಳಿ ಟೈಮ್ಸ್) : ಏಕ ನಿವೇಶನ ವಿನ್ಯಾಸ ನಕ್ಷೆ ಅನುಮೋದನೆ ಮತ್ತು ಕಟ್ಟಡ ಪರವಾನಿಗೆಯ ಕಟ್ಟಡದ ವಿನ್ಯಾಸ ನಕ್ಷೆಗೆ ತಾಂತ್ರಿಕ ಅನುಮೋದನೆ ಹಾಗೂ ಸ್ವಾಧೀನಪತ್ರ ವಿತರಣೆ, ಸರ್ಕಾರದ ಇತ್ತೀಚಿನ ಆದೇಶ ಮತ್ತು ಸುತ್ತೋಲೆಗಳ ಕುರಿತು ಮಾಹಿತಿ ಕಾರ್ಯಕ್ರಮವು ಬಿ ಸಿ ರೋಡಿನ ತಾಲೂಕು ಪಂಚಾಯತ್ ಎಸ್ ಜಿ ಎಸ್ ವೈ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.
ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಗಾಯತ್ರಿ ದೊಂಬರ, ಮಂಗಳೂರು ಮಹಾನಗರ ಪಾಲಿಕೆ ನಗರ ಯೋಜನಾ ಪ್ರಾಧಿಕಾರದ ಸಹಾಯಕ ನಿದೇರ್ಶಕ ಗುರುಪ್ರಸಾದ್ ಅವರು ಮಾಹಿತಿ ನೀಡಿದರು.
ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್, ಜಿ ಪಂ ಯೋಜನಾ ನಿರ್ದೇಶಕ ಜಯರಾಂ ಕೆ ಇ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸಚಿನ್ ಕುಮಾರ್, ಸಹಾಯಕ ಕಾರ್ಯಪಾಲಕ ಅಭಿಯಂತರ ತಾರಾನಾಥ್ ಸಾಲ್ಯಾನ್, ಸಹಾಯಕ ನಿರ್ದೇಶಕ ವಿಶ್ವನಾಥ್ ಬಿ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯತ್ ಸಿಬ್ಬಂದಿಗಳು ಭಾಗವಹಿಸಿದ್ದರು.
0 comments:
Post a Comment