ಕ್ಷೇತ್ರದ 5 ಮಂದಿ ವಿದ್ಯಾರ್ಥಿಗಳು ಸಿ.ಎ. ಪರೀಕ್ಷೆ ತೇರ್ಗಡೆಯಾಗಿದ್ದು ಅತ್ಯಂತ ಹೆಮ್ಮೆಯ ವಿಚಾರ : ಸಾಧಕ ವಿದ್ಯಾರ್ಥಿಗಳ ಬೆನ್ನು ತಟ್ಟಿದ ಪುತ್ತೂರು ಶಾಸಕ ಅಶೋಕ್ ರೈ - Karavali Times ಕ್ಷೇತ್ರದ 5 ಮಂದಿ ವಿದ್ಯಾರ್ಥಿಗಳು ಸಿ.ಎ. ಪರೀಕ್ಷೆ ತೇರ್ಗಡೆಯಾಗಿದ್ದು ಅತ್ಯಂತ ಹೆಮ್ಮೆಯ ವಿಚಾರ : ಸಾಧಕ ವಿದ್ಯಾರ್ಥಿಗಳ ಬೆನ್ನು ತಟ್ಟಿದ ಪುತ್ತೂರು ಶಾಸಕ ಅಶೋಕ್ ರೈ - Karavali Times

728x90

3 September 2025

ಕ್ಷೇತ್ರದ 5 ಮಂದಿ ವಿದ್ಯಾರ್ಥಿಗಳು ಸಿ.ಎ. ಪರೀಕ್ಷೆ ತೇರ್ಗಡೆಯಾಗಿದ್ದು ಅತ್ಯಂತ ಹೆಮ್ಮೆಯ ವಿಚಾರ : ಸಾಧಕ ವಿದ್ಯಾರ್ಥಿಗಳ ಬೆನ್ನು ತಟ್ಟಿದ ಪುತ್ತೂರು ಶಾಸಕ ಅಶೋಕ್ ರೈ

 ಸಿ.ಎ. ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಶಾಸಕರಿಂದ ಸನ್ಮಾನ


ಪುತ್ತೂರು, ಸೆಪ್ಟೆಂಬರ್ 03, 2025 (ಕರಾವಳಿ ಟೈಮ್ಸ್) : ಯಾರಲ್ಲಿ ಯಾವ ಪ್ರತಿಭೆ ಇದೆ ಎಂದು ಯಾರಿಗೂ ಹೇಳಲು ಸಾಧ್ಯವಿಲ್ಲ, ಪ್ರತಿಯೊಬ್ಬರಲ್ಲೂ ಒಂದೊಂದು ಪ್ರತಿಭೆಗಳಿದ್ದು, ಅದಕ್ಕೆ ಪೆÇ್ರೀತ್ಸಾಹ ನೀಡುವ ಮೂಲಕ ಅದನ್ನು ಬೆಳೆಸುವ ಜವಾಬ್ದಾರಿ ಪೆÇೀಷಕರು ಹಾಗೂ ನಮ್ಮೆಲ್ಲರ ಮೇಲಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು.

ಅವರು ತಮ್ಮ ಕಚೇರಿಯಲ್ಲಿ ಸಿ ಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು.

ಪುತ್ತೂರಿನಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಅತ್ತುತ್ತಮ ಅಂಕ ಪಡೆದ ವಿದ್ಯಾರ್ಥಿಗಳು ನಮ್ಮಲ್ಲಿದ್ದಾರೆ, ಇದೀಗ ಸಿ ಎ ಅತ್ಯಂತ ಕಠಿಣ ಪರೀಕ್ಷೆಯಲ್ಲೂ ಉತ್ತೀರ್ಣರಾಗುವ ಮೂಲಕ ಪುತ್ತೂರಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ ಇವರೆಲ್ಲಾ ಪುತ್ತೂರಿನ ಆಸ್ತಿಯಾಗಿದ್ದಾರೆ ಎಂದ ಶಾಸಕರು ಕಠಿಣ ಪರಿಶ್ರಮ ಇದ್ದಲ್ಲಿ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಸಿ ಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳೇ ಸಾಕ್ಷಿಯಾಗಿದ್ದಾರೆ ಎಂದರು.

ಇವತ್ತು ನನಗೆ ಅತ್ಯಂತ ಸಂತಸದ ದಿನವಾಗಿದೆ. ನನ್ನ ಕ್ಷೇತ್ರದ 5 ಮಂದಿ ವಿದ್ಯಾರ್ಥಿಗಳು ಸಿ ಎ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು ನಮಗೆ ಹೆಮ್ಮೆ ತಂದಿದೆ ಎಂದ ಶಾಸಕ ಅಶೋಕ್ ರೈ ಈ ದಿನವನ್ನು ನಾವೆಲ್ಲರೂ ಸಂಭ್ರಮಿಸುವಂತಾಗಬೇಕು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಿ ಸನ್ಮಾನಿಸುವುದು ನಮ್ಮ ಕರ್ತವ್ಯ ಎಂದು ನಾನು ನಂಬಿದ್ದೇನೆ. ಶಾಸಕನಾದವರು ಕೇವಲ ರಸ್ತೆ, ಚರಂಡಿ, ಇನ್ನಿತರ ಅಭಿವೃದ್ದಿ ಕೆಲಸವನ್ನು ಮಾತ್ರ ಮಾಡುವುದಲ್ಲ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಗೌರವಿಸಬೇಕಾಗಿದೆ ಎಂದರು. ಪ್ರತಿಯೊಬ್ಬ ತಂದೆ ತಾಯಿಯೂ ತಮ್ಮ ಮಕ್ಕಳು ವಿದ್ಯಾವಂತರಾಗಬೇಕು ಎಂಬ ಕನಸು ಹೊಂದಿರುತ್ತಾರೆ ಎಂದು ಹೇಳಿದ ಶಾಸಕರು ಮಕ್ಕಳು ದಾರಿತಪ್ಪದಂತೆ ತಡೆಯುವ ನಿಟ್ಟಿನಲ್ಲಿ ಪೆÇೀಷಕರ ಜವಾಬ್ದಾರಿಯೂ ಇದೆ ಎಂದು ಶಾಸಕರು ಪೋಷಕರಿಗೆ ಕಿವಿ ಮಾತು ಹೇಳಿದರು.

ವಿದ್ಯಾರ್ಥಿಗಳಾದ ಅಂಕಿತ್ ಎನ್ ಕೆ ಕುರಿಯ, ಮಹಮ್ಮದ್ ಇಯಾಝ್, ನಿಶ್ಚಲ್ ರೈ ಅವರಿಗೆ ಕಾರ್ಯಕ್ರಮದ ವೇದಿಕೆಯಲ್ಲಿ ಸನ್ಮಾನಿಸಲಾಯಿತು. ರಾಜೇಶ್ ಬನ್ನೂರು ಅವರ ಪುತ್ರ ಆದಿತ್ಯ ಆರ್ ಬನ್ನೂರು ಅವರು ಬೆಂಗಳೂರಿನಲ್ಲಿದ್ದು, ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದ ಕಾರಣ ಅವರ ಮನೆಗೆ ತೆರಳಿ ಸನ್ಮಾನ ಪತ್ರವನ್ನು ಹಸ್ತಾಂತರಿಸಲಾಯಿತು. 

ಪುತ್ತೂರು ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಕೋಡಿಂಬಾಡಿ ಗ್ರಾ ಪಂ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರ್, ಪುತ್ತೂರು ನಗರ ಯೋಜನಾ ಪ್ರಾಧಿಕಾರ (ಪುಡಾ) ಸದಸ್ಯರಾದ ನಿಹಾಲ್ ಪಿ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಮುರಳೀಧರ್ ರೈ ಮಠಂತಬೆಟ್ಟು ಅತಿಥಿಗಳಾಗಿ ಭಾಗವಹಿಸಿದ್ದರು. 

ತಾಲೂಕು ಅಕ್ರಮ-ಸಕ್ರಮ ಸಮಿತಿ ಸದಸ್ಯ ರಾಮಣ್ಣ ಪಿಲಿಂಜ ಸ್ವಾಗತಿಸಿ, ಟ್ರಸ್ಟ್ ಸದಸ್ಯ ಯೋಗೀಶ್ ಸಾಮಾನಿ ಕಾರ್ಯಕ್ರಮ ನಿರೂಪಿಸಿದರು. ಶಾಸಕರ ಕಚೇರಿ ಸಿಬಂದಿ ರಚನಾ ಹಾಗೂ ಪ್ರವೀಣ್, ಶಾಸಕರ ಅಪ್ತ ಸಹಾಯಕ ರಂಜಿತ್ ಸುವರ್ಣ ಸಹಕರಿಸಿದರು.

  • Blogger Comments
  • Facebook Comments

0 comments:

Post a Comment

Item Reviewed: ಕ್ಷೇತ್ರದ 5 ಮಂದಿ ವಿದ್ಯಾರ್ಥಿಗಳು ಸಿ.ಎ. ಪರೀಕ್ಷೆ ತೇರ್ಗಡೆಯಾಗಿದ್ದು ಅತ್ಯಂತ ಹೆಮ್ಮೆಯ ವಿಚಾರ : ಸಾಧಕ ವಿದ್ಯಾರ್ಥಿಗಳ ಬೆನ್ನು ತಟ್ಟಿದ ಪುತ್ತೂರು ಶಾಸಕ ಅಶೋಕ್ ರೈ Rating: 5 Reviewed By: karavali Times
Scroll to Top