ಪುತ್ತೂರು, ಸೆಪ್ಟೆಂಬರ್ 12, 2025 (ಕರಾವಳಿ ಟೈಮ್ಸ್) : ಪುತ್ತೂರು ಶಾಸಕ ಅಶೋಕ್ ರೈ ಅವರ ಶಿಫಾರಸ್ಸಿನ ಮೇರೆಗೆ ಮಗು ಸಹಿತ ಇಬ್ಬರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಒಟ್ಟು 7 ಲಕ್ಷ ರೂಪಾಯಿ ಪರಿಹಾರ ಧನ ಮಂಜೂರಾತಿಯಾಗಿದೆ.
ಕೊಳ್ತಿಗೆ ಗ್ರಾಮದ ಪಾಲ್ತಾಡು ನಿವಾಸಿ ಹರ್ಷದ್ ಸಾಹೇಬ್ ಅವರ 2 ವರ್ಷದ ತಮೀಮ್ ಎಂಬ ಮಗು ರಕ್ತ ಕ್ಯಾನ್ಸರಿನಿಂದ ಬಳಲುತ್ತಿದ್ದು ಮಗುವಿನ ಚಿಕಿತ್ಸೆಗೆ 12 ಲಕ್ಷ ಖರ್ಚು ತಗುಲಿದೆ. ಬಡ ಕುಟುಂಬಕ್ಕೆ ನೆರವು ನೀಡುವಂತೆ ಶಾಸಕ ಅಶೋಕ್ ರೈ ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದರು. ಶಾಸಕರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು 4 ಲಕ್ಷ ರೂಪಾಯಿ ಪರಿಹಾರ ಧನ ಮಂಜೂರು ಮಾಡಿದ್ದಾರೆ.
ಇದಲ್ಲದೆ ಮೂಡಬಿದ್ರೆಯ ಪುತ್ತಿಗೆ ಪದವು ನಿವಾಸಿ ಮೊಹಮ್ಮದ್ ಕಬೀರ್ ಅವರ ಪುತ್ರ ಮೊಹಮ್ಮದ್ ಫಯಾಝ್ (16) ಅವರೂ ಕೂಡಾ ಕ್ಯಾನರ್ ಖಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆಗೆ ನೆರವು ಕೋರಿ ಶಾಸಕ ಅಶೋಕ್ ರೈ ಅವರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದರು. ಈ ಬಾಲಕನ ಚಿಕಿತ್ಸೆಗೆ 3 ಲಕ್ಷ ರೂಪಾಯಿ ಪರಿಹಾರಧನ ಘೋಷಿಸಲಾಗಿದೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ.

















0 comments:
Post a Comment