ಮಂಗಳೂರು, ಸೆಪ್ಟೆಂಬರ್ 19, 2025 (ಕರಾವಳಿ ಟೈಮ್ಸ್) : ಕರಾವಳಿ ಟೈಗರ್ ಎಂಬ ಇನ್ ಸ್ಟಾಗ್ರಾಂ ಪೇಜಿನಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕಿಲ್ಲೂರು ಮಾಲವಂತಿಗೆ ನಿವಾಸಿ ಶರೀಫ್ ಎಂಬವರ ಪುತ್ರ ಮೊಹಮ್ಮದ್ ಕೈಫ್ (22) ಎಂದು ಹೆಸರಿಸಲಾಗಿದೆ.
ಜುಲೈ 19 ರಂದು ಮಂಗಳೂರು ನಗರ ಸಿ.ಇ.ಎನ್ ಅಪರಾಧ ಪೆÇಲೀಸ್ ಠಾಣೆಯಲ್ಲಿ ಕರಾವಳಿ ಟೈಗರ್ ಎಂಬ ಇನ್ಸ್ಟಾಗ್ರಾಂ ಪೇಜ್ ಮುಖಾಂತರ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ ಆಧಾರದಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಡುತ್ತಿದ್ದ ಆರೋಪಿತನನ್ನು ತಾಂತ್ರಿಕ ಸಾಕ್ಷ್ಯಗಳ ಮುಖಾಂತರ ಪೊಲೀಸರು ಪತ್ತೆ ಹಚ್ಚಿದ್ದಾರೆ. ಆರೋಪಿ ತಮಿಳುನಾಡಿಲ್ಲಿರುವ ಬಗ್ಗೆ ಮಾಹಿತಿ ಸಂಗ್ರಹಿಸಿದ ಪೊಲೀಸರು ವಶಕ್ಕೆ ಪಡೆದುಕೊಂಡು ದಸ್ತಗಿರಿ ಮಾಡಿದ್ದಾರೆ. ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಅಲ್ಲದೇ ಇದೇ ಕರಾವಳಿ ಟೈಗರ್ಸ್ ಎಂಬ ಪೇಜ್ ವಿರುದ್ದ ಮಂಗಳೂರು ನಗರದ ಬಜ್ಪೆ ಪೆÇಲೀಸ್ ಠಾಣೆಯಲ್ಲಿಯೂ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
0 comments:
Post a Comment