ಪುತ್ತೂರು, ಸೆಪ್ಟೆಂಬರ್ 19, 2025 (ಕರಾವಳಿ ಟೈಮ್ಸ್) : ಫೇಸ್ ಬುಕ್ ಪೇಜಿನಲ್ಲಿ ರಾಜಕೀಯ ಪಕ್ಷವೊಂದರ ನಾಯಕರಿಗೆ ಅವಾಚ್ಯವಾಗಿ ನಿಂದಿಸಿರುವ ಆರೋಪದಲ್ಲಿ ನವೀನ್ ರೈ ಕೈಕಾರ ಎಂಬಾತನ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಪುತ್ತೂರು ಕಸಬಾ ಗ್ರಾಮದ ನಿವಾಸಿ ಶಿವಕುಮಾರ್ ಪಿ ಬಿ (54) ಅವರು ದೂರು ನೀಡಿದ್ದು, ಇವರು ತನ್ನ ಮೊಬೈಲಿನಲ್ಲಿ ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ವೀಕ್ಷಿಸುತ್ತಿದ್ದಾಗ, ಆರೋಪಿ ನವೀನ್ ರೈ ಕೈಕಾರ ಎಂಬಾತನು, ಆತನ ಪೇಸ್ಬುಕ್ ಪೇಜಿನಲ್ಲಿ ರಾಜಕೀಯ ಪಕ್ಷವೊಂದರ ನಾಯಕರಿಗೆ ಅವ್ಯಾಚವಾಗಿ ನಿಂದಿಸಿರುವ ವಿಡಿಯೋವನ್ನು ಪ್ರಸಾರ ಮಾಡಿರುವುದು ಕಂಡುಬಂದಿರುತ್ತದೆ ಎಂದು ನೀಡಿದ ದೂರಿನಂತೆ ಪುತ್ತೂರು ನಗರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment