ಮಂಗಳೂರು, ಸೆಪ್ಟೆಂಬರ್ 30, 2025 (ಕರಾವಳಿ ಟೈಮ್ಸ್) : ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಅಕ್ಟೋಬರ್ 1 ರಂದು ಬುಧವಾರ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.
ಅಪರಾಹ್ನ 2.55ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಮಿಸುವ ಡಿಸಿಎಂ 3.45ಕ್ಕೆ ಕುದ್ರೋಳಿ ದೇವಸ್ಥಾನದ ದಸರಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಬಳಿಕ ಸಂಜೆ 5 ಗಂಟೆಗೆ ನಗರದ ಮಂಗಳಾ ಸ್ಟೇಡಿಯಂನಲ್ಲಿ ಮಿಥುನ್ ರೈ ನೇತೃತ್ವದಲ್ಲಿ ನಡೆಯುವ “ಪಿಲಿನಲಿಕೆ” ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ 7.15ಕ್ಕೆ ಬೆಂಗಳೂರಿಗೆ ನಿರ್ಗಮಿಸುವರು ಎಂದು ಪ್ರಕಟಣೆ ತಿಳಿಸಿದೆ.






















0 comments:
Post a Comment