ಮಂಗಳೂರು ದಸರಾ ಸಿದ್ದತೆ ಬಗ್ಗೆ ಅಧಿಕಾರಿಗಳ ಸಭೆ ನಡೆಸಿದ ಉಸ್ತುವಾರಿ ಸಚಿವರು - Karavali Times ಮಂಗಳೂರು ದಸರಾ ಸಿದ್ದತೆ ಬಗ್ಗೆ ಅಧಿಕಾರಿಗಳ ಸಭೆ ನಡೆಸಿದ ಉಸ್ತುವಾರಿ ಸಚಿವರು - Karavali Times

728x90

21 September 2025

ಮಂಗಳೂರು ದಸರಾ ಸಿದ್ದತೆ ಬಗ್ಗೆ ಅಧಿಕಾರಿಗಳ ಸಭೆ ನಡೆಸಿದ ಉಸ್ತುವಾರಿ ಸಚಿವರು

ಮಂಗಳೂರು, ಸೆಪ್ಟೆಂಬರ್ 21, 2025 (ಕರಾವಳಿ ಟೈಮ್ಸ್) : ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಭಾನುವಾರ ಮಂಗಳೂರು ದಸರಾ ಉತ್ಸವ ಸಿದ್ಧತೆಗಳ ಪರಿಶೀಲನೆ ನಡೆಸಿದರು.

ನಗರದ ಸರ್ಕ್ಯುಟ್ ಹೌಸ್ ನಲ್ಲಿ ಈ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ದಸರಾ ಕಾರ್ಯಕ್ರಮಗಳ ಸಂದರ್ಭದಲ್ಲಿ ನಗರವನ್ನು ಅಲಂಕರಿಸುವ ಮತ್ತು ಅಗತ್ಯ ಸೌಲಭ್ಯಗಳನ್ನು ಒದಗಿಸಲು ಸೂಚಿಸಿದರು. ನಗರದಾದ್ಯಂತ ವಿದ್ಯುತ್ ದೀಪಗಳಿಂದ ಅಲಂಕರಿಸಬೇಕು. ನಗರದ ಪ್ರಮುಖ ಜಂಕ್ಷನ್ ಗಳನ್ನು ಅಲಂಕರಿಸಬೇಕು. ದಸರಾ ಮೆರವಣಿಗೆ ಸಾಗುವ ರಸ್ತೆಗಳಲ್ಲಿ ಹಾಗೂ ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ನಿರಂತರ ಸ್ವಚ್ಛತೆ ಕಾಪಾಡಲು ತಂಡ ನಿಯೋಜಿಸಬೇಕು. ಸಾರ್ವಜನಿಕರಿಗೆ ಅಗತ್ಯ ಸೌಲಭ್ಯಗಳು ಸದಾ ಲಭ್ಯವಾಗುವಂತೆ ನಿಗಾ ವಹಿಸಬೇಕು. ಪೆÇಲೀಸ್ ಭದ್ರತೆಯನ್ನು ಎಲ್ಲಾ ಕಡೆ ಕಲ್ಪಿಸಲು ಎಂದು ಸಚಿವರು ಸೂಚಿಸಿದರು. 

ಸಭೆಯಲ್ಲಿ ಜಿಲ್ಲಾಧಿಕಾರಿ ದರ್ಶನ್ ಎಚ್ ವಿ, ಪೆÇಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ಪೆÇಲೀಸ್ ವರಿಷ್ಟಾಧಿಕಾರಿ ಅರುಣ್ ಕೆ., ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಮೊದಲಾದವರಿದ್ದರು. 

ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ ನೀಡಿದರು. ಕುದ್ರೋಳಿಯಲ್ಲಿ ದಸರಾ ನವರಾತ್ರಿ ಕಾರ್ಯಕ್ರಮಗಳ ಸಿದ್ಧತೆಗಳನ್ನು ವೀಕ್ಷಿಸಿದರು.  ಮಾಜಿ ಶಾಸಕ ಹರೀಶ್ ಕುಮಾರ್, ಪದ್ಮರಾಜ್ ಇದ್ದರು.

  • Blogger Comments
  • Facebook Comments

0 comments:

Post a Comment

Item Reviewed: ಮಂಗಳೂರು ದಸರಾ ಸಿದ್ದತೆ ಬಗ್ಗೆ ಅಧಿಕಾರಿಗಳ ಸಭೆ ನಡೆಸಿದ ಉಸ್ತುವಾರಿ ಸಚಿವರು Rating: 5 Reviewed By: karavali Times
Scroll to Top