ಬಂಟ್ವಾಳ, ಸೆಪ್ಟೆಂಬರ್ 13, 2025 (ಕರಾವಳಿ ಟೈಮ್ಸ್) : ಕಾರು ಡಿಕ್ಕಿಯಾಗಿ ಹೆದ್ದಾರಿ ದಾಟುತ್ತಿದ್ದ ವ್ಯಕ್ತಿರ್ಯೋರ್ವರು ಮೃತಪಟ್ಟ ಘಟನೆ ಪೆರಾಜೆ ಗ್ರಾಮದ ಗಡಿಯಾರ ಎಂಬಲ್ಲಿ ಸೆ 12 ರಂದು ಸಂಭವಿಸಿದೆ.
ಮೃತ ಪಾದಚಾರಿ ವ್ಯಕ್ತಿಯನ್ನು ಶಂಶುದ್ದೀನ್ ಎಂದು ಹೆಸರಿಸಲಾಗಿದೆ. ಇವರು ಗಡಿಯಾರ ಅಟೋ ರಿಕ್ಷಾ ನಿಲ್ದಾಣದ ಬಳಿ ಹೆದ್ದಾರಿ ದಾಟುತ್ತಿದ್ದ ವೇಳೆ ದೀಕ್ಷಿತ್ ಎಂಬವರು ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಚಲಾಯಿಸಿಕೊಂಡು ಬಂದ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದ ತೀವ್ರತೆಗೆ ತಲೆ ಹಾಗೂ ದೇಹದ ಇತರ ಭಾಗಗಳಿಗೆ ಗಂಭೀರ ಗಾಯಗೊಂಡ ಶಂಶುದ್ದೀನ್ ಅವರನ್ನು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮೃತರ ಸಂಬಂಧಿ ಮಹಮ್ಮದ್ ಅಶ್ರಫ್ ಅವರು ನೀಡಿದ ದೂರಿನಂತೆ ವಿಟ್ಲ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment